ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧನಕ್ಕೆ ಒಳಪಡಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಿಹಾರ್ ಜೈಲಿನಲ್ಲಿ ಎರಡನೇ ಹಂತದ ವಿಚಾರಣೆ ಬಳಿಕ ಸಿಸೋಡಿಯಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಬಂಧನಕ್ಕೆ ಒಳಪಡಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡುವುದರಿಂದ ಸಿಸೋಡಿಯಾ ನುಣುಚಿಕೊಳ್ಳುತ್ತಿದ್ದಾರೆ ಮತ್ತು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಟಾನದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಬಳಿಕ, ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಾರ್ಚ್ 7ರಂದು ಇ.ಡಿ ಸಿಸೋಡಿಯಾ ಅವರನ್ನು ಮೊದಲ ಬಾರಿಗೆ ವಿಚಾರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.