ನವದೆಹಲಿ : ಬಾಹ್ಯಾಕಾಶಕ್ಕೆ ಮನುಷ್ಯನನ್ನು ಕಳುಹಿಸುವ ಇಸ್ರೊದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ರಷ್ಯಾದ ಪರಿಣತಿಯ ಲಾಭ ದೊರೆಯುವ ಸಾಧ್ಯತೆ ಇದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ದೆಹಲಿಗೆ ಮುಂದಿನ ತಿಂಗಳು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಾಹ್ಯಾಕಾಶ ಕಾರ್ಯಕ್ರಮಗಳ ಅನುಭವ ಹಂಚಿಕೆ ಸಂಬಂಧ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ರಷ್ಯಾದ ಪಥದರ್ಶಕ ಮತ್ತು ಜಾಡುಪತ್ತೆ ವ್ಯವಸ್ಥೆ (ಜಿಪಿಎಸ್) ಗ್ಲೋನಸ್ ಮತ್ತು ಭಾರತದ ಜಿಪಿಎಸ್ ವ್ಯವಸ್ಥೆ ನಾವಿಕ್‌ನ ಭೂಕೇಂದ್ರ ಸ್ಥಾಪನೆಯ ಬಗ್ಗೆಯೂ ಚರ್ಚೆ ನಡೆಯಲಿದೆ.

ಬಾಹ್ಯಾಕಾಶಕ್ಕೆ ಮನುಷ್ಯರನ್ನು ಕಳುಹಿಸುವ ವಿಚಾರದಲ್ಲಿ ಫ್ರಾನ್ಸ್‌ನ ಅನುಭವವನ್ನು ಹಂಚಿಕೊಳ್ಳುವ ಬಗ್ಗೆ ಆ ದೇಶದ ಜತೆಗೆ ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2022ರ ಹೊತ್ತಿಗೆ ಮೂವರು ಭಾರತೀಯರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಯನ್ನು ಇಸ್ರೊ ಹಾಕಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.