ನವದೆಹಲಿ: ಕಾಂಗ್ರೆಸ್‌ನ ಜಿ-23 ನಾಯಕರು ಸಭೆ ನಡೆಸಿದ ಬೆನ್ನಲ್ಲೇ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹರಿಯಾಣದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಕುರಿತು ಆತ್ಮಾವಲೋಕನ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ‘ಜಿ-23’ ನಾಯಕರು ಗುಲಾಮ್ ನಭಿ ಆಜಾದ್ ಅವರ ನಿವಾಸದಲ್ಲಿ ಬುಧವಾರ ಸಭೆ ನಡೆಸಿದ್ದರು.ಈ ಬೆಳವಣಿಗೆ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಭೂಪಿಂದರ್ ಸಿಂಗ್ ಹೂಡಾ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಓದಿ... ದಿ ಕಾಶ್ಮೀರ್ ಫೈಲ್ಸ್ | ಬಘೇಲ್ರನ್ನು ಸೋನಿಯಾ ವಜಾಗೊಳಿಸಬಹುದೇ –ಬಿಜೆಪಿ ಪ್ರಶ್ನೆ

ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರ ನಿವಾಸಕ್ಕೂ ರಾಹುಲ್ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಎಲ್ಲಾ ಹಂತಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ‘ಎಲ್ಲರನ್ನು ಒಳಗೊಳ್ಳುವ ಹಾಗೂ ಸಾಮೂಹಿಕ ನಾಯಕತ್ವ’ ಮಾದರಿಯನ್ನು ಅಳವಡಿಸಿಕೊಳ್ಳುವುದೊಂದೇ ಪಕ್ಷವನ್ನು ಮುನ್ನಡೆಸಲು ಬೇಕಾಗಿರುವ ಮಾರ್ಗ’ ಎಂದು ಕಾಂಗ್ರೆಸ್‌ನ ಜಿ-23 ನಾಯಕರು ಬುಧವಾರ ಪ್ರತಿಪಾದಿಸಿದ್ದರು.

‘ಸಮಾನ ಮನಸ್ಕ ಪಕ್ಷಗಳ ಜತೆ ಮಾತುಕತೆ ನಡೆಸುವ ಮೂಲಕ 2024ರ ಲೋಕಸಭಾ ಚುನಾವಣೆ ವೇಳೆಗೆ ಪರ್ಯಾಯ ರಂಗ ರಚನೆಗೆ ಪಕ್ಷ ಮುಂದಾಗಬೇಕು ಎಂದು ನಾಯಕತ್ವವನ್ನು ಒತ್ತಾಯಿಸಲಾಯಿತು’ ಎಂದು ಸಭೆ ನಂತರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಮುಖಂಡರಾದ ಕಪಿಲ್ ಸಿಬಲ್, ಆನಂದ ಶರ್ಮಾ,ಭೂಪಿಂದರ್ ಸಿಂಗ್ ಹೂಡಾ, ಪೃಥ್ವಿರಾಜ್ ಚವಾಣ್, ಮನೀಷ್ ತಿವಾರಿ, ಶಶಿ ತರೂರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.