ಮುಂಬೈ: ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಯಾರಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ, ಸಂಸದ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.

ಇದನ್ನೂ ಓದಿ:ತರೂರ್ ಸ್ಪರ್ಧೆ ದೇಶ ಮತ್ತು ಕಾಂಗ್ರೆಸ್ ಅಭಿವೃದ್ಧಿಗೆ ಪೂರಕ: ಖರ್ಗೆ

2024ರ ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ವಿಪಕ್ಷದ ಸ್ಥಾನದಲ್ಲಿ ಕೂರುವುದು ಖಚಿತ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಅಗತ್ಯವಿದೆ. ನಾನೇ ಬದಲಾವಣೆಯ ಪರಿವರ್ತಕ ಎಂದು ಸಹ ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ. ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ ಇನ್ನೊಂದೆಡೆ ದ್ವೇಷ ಹರಡಲಾಗುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅನುಭವಿ ನಾಯಕರನ್ನು ಹೊಂದಿದ್ದು, ದೇಶವನ್ನು ಮುನ್ನಡೆಸಲು ಸಮರ್ಥರಾಗಿದ್ದಾರೆ. ಮಗದೊಮ್ಮೆ ಜನರ ವಿಶ್ವಾಸವನ್ನು ಗೆಲ್ಲಬೇಕಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.