ಉದಕಮಂಡಲ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪಕ್ಕದಲ್ಲಿರುವ ಮನೆಯೊಂದು ಕುಸಿದ ಪರಿಣಾಮ, ಕೆಲಸ ಮಾಡುತ್ತಿದ್ದ 6 ಮಹಿಳಾ ಕಾರ್ಮಿಕರು ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.

ಶಕೀಲಾ (30), ಸಂಗಿತಾ (35), ಭಾಗ್ಯಾ (36), ಉಮಾ (35), ಮುತ್ತುಲಕ್ಷ್ಮಿ (36) ಹಾಗೂ ರಾಧಾ (38) ಮೃತರು ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾರ್ಮಿಕರು ಎಂದಿನಂತೆ ತಾವು ಕಾರ್ಯ ನಿರ್ವಹಿಸುವ ನಿವೇಶನದಲ್ಲಿ ಮಣ್ಣನ್ನು ತೆಗೆದು, ಸಾಗಿಸುತ್ತಿದ್ದರು. ಆದರೆ ಇದೇ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಮನೆಯೊಂದು ಏಕಾಏಕಿ ಕುಸಿದಿದೆ. ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ, ಸಿಲುಕಿದವರನ್ನು ಹೊರಕ್ಕೆ ತೆಗೆಯುವ ಪ್ರಕ್ರಿಯೆ ನಡೆಸಿದರು. ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.