ಪಟ್ನಾ: ‘ಅವರು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ’ ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆರೋಪಕ್ಕೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತಿರುಗೇಟು ನೀಡಿದ್ದಾರೆ. ‘ನಿತೀಶ್ ಮೇಲೆ ಅವರ ವಯಸ್ಸು ಪರಿಣಾಮ ಬೀರುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

‘ನಿತೀಶ್ ಮೇಲೆ ಅವರ ವಯಸ್ಸು ಪ್ರಭಾವವನ್ನು ಬೀರುತ್ತಿದೆ. ಅವರು ಏನನ್ನೋ ಹೇಳಲು ಬಯಸುತ್ತಾರೆ. ಆದರೆ, ಬೇರೆಯದ್ದೇ ಮಾತನಾಡುತ್ತಾರೆ. ನಾನೇನಾದರೂ ಬಿಜೆಪಿ ಅಜೆಂಡಾಕ್ಕಾಗಿ ಕೆಲಸ ಮಾಡುತ್ತಿದ್ದರೆ, ನಾನೇಕೆ ಕಾಂಗ್ರೆಸ್ ಅನ್ನು ಬಲಪಡಿಸುವ ಬಗ್ಗೆ ಮಾತನಾಡುತ್ತಿದ್ದೆ? ಅವರು ಭ್ರಮೆಗೆ ಒಳಗಾಗಿದ್ದಾರೆ. ರಾಜಕೀಯವಾಗಿ ಪ್ರತ್ಯೇಕವಾಗುತ್ತಿದ್ದಾರೆ. ನಿತೀಶ್ ಅವರು ನಂಬಿಕೆ ಅರ್ಹರಲ್ಲದವರಿಂದ ಸುತ್ತುವರಿಯಲ್ಪಟ್ಟಿದ್ದಾರೆ‘ ಎಂದು ಕಿಶೋರ್ ಹೇಳಿದ್ದಾರೆ.

ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮಸ್ಥಳ ಸಿತಾಬ್ ದಿಯಾರಾದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಿತೀಶ್ ಕುಮಾರ್, ‘ಜೆಡಿಯು ಅನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಪ್ರಶಾಂತ್ ಕಿಶೋರ್ ಹೇಳಿದ್ದರು. ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.