ನವದೆಹಲಿ: ದೆಹಲಿ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರದ ಬದಲಾವಣೆಯ ಮಾಡುವ ಗುರಿಯನ್ನು ಹೊಂದಿಲ್ಲ. ಬದಲಾಗಿ ಅವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಬೇಕಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಬುಧವಾರ ಹೇಳಿಕೆ ನೀಡಿದ್ದಾರೆ.

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್, ಕೇಂದ್ರ ಸರ್ಕಾರವು ರೈತರ ಸಮಸ್ಯೆಗಳನ್ನು ಬಗೆ ಹರಿಸುವ ವರೆಗೂ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮುಂದುವರಿಯಲಿದೆ ಎಂದು ಪುನರುಚ್ಚರಿಸಿದರು.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರದ ಬದಲಾವಣೆ ಮಾಡುವ ಗುರಿಯನ್ನು ನಾವು ಹೊಂದಿಲ್ಲ. ಸರ್ಕಾರ ತನ್ನ ಕೆಲಸವನ್ನು ಮಾಡಬೇಕು. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲಿನ ಕಾನೂನನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ರೈತ ಸಂಘಟನೆಗಳೊಂದಿಗೆ ಸರ್ಕಾರ ಮಾತುಕತೆ ಪ್ರಾರಂಭಿಸುವ ವರೆಗೂ ಆಂದೋಲನವನ್ನು ದೀರ್ಘ ಕಾಲ ಮುಂದುವರಿಸಲಾಗುವುದು ಎಂಬುದಾಗಿಯೂ ಹೇಳಿದರು.

ಇದನ್ನೂ ಓದಿ:ರೈತರ ಪ್ರತಿಭಟನೆ | ಭಾರತದ ಚೌಕಟ್ಟಿನೊಳಗೆ ಸಮಸ್ಯೆ ಬಗೆಹರಿಸೋಣ: ಶಿವರಾಜ್ ಕುಮಾರ್

ಏತನ್ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸಂಘಟನೆಯಲ್ಲಿ ಒಮ್ಮತವಿದೆ. ಈ ಕುರಿತು ಸರ್ಕಾರ ಯಾವುದೇ ಭ್ರಮೆಯಲ್ಲಿರಬಾರದು ಎಂದು ಎಚ್ಚರಿಸಿದರು.

ದೇಶದೆಲ್ಲೆಡೆ ಬೃಹತ್ ಸಮಾವೇಶಗಳನ್ನು ನಡೆಸುವುದು ಮತ್ತು 40 ಲಕ್ಷ ಟ್ರ್ಯಾಕ್ಟರ್‌ಗಳನ್ನು ಸಂಯೋಜಿಸಿ ಆಂದೋಲನವನ್ನು ಮತ್ತಷ್ಟು ವಿಸ್ತರಿಸಲಾಗುವುದು. ರೈತ ಮುಖಂಡರು ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ಆಂದೋಲನವನ್ನು ವ್ಯಾಪಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.