ಡೆಹ್ರಾಡೂನ್: ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ನಂತರ ನಿವೃತರಾಗುವ 'ಅಗ್ನಿವೀರ'ರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಘೋಷಿಸಿದ್ದಾರೆ.

'ಕಾರ್ಗಿಲ್ ವಿಜಯ ದಿವಸ'ದ 25ನೇ ವಾರ್ಷಿಕೋತ್ಸವದ ವೇಳೆಯಲ್ಲಿ ಈ ಕುರಿತು ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಅಗ್ನಿವೀರರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಕಾನೂನಿನಲ್ಲಿ ಅಗತ್ಯ ಬದಲಾವಣೆ ತರಲಾಗುವುದು ಎಂದು ತಿಳಿಸಿದ್ದಾರೆ.

'ನಾವು ಸರ್ಕಾರಿ ಸೇವೆಗಳಲ್ಲಿ ಮೀಸಲಾತಿ ನೀಡಲು ಕಾನೂನಿನಲ್ಲಿ ಬೇಕಾದ ಬದಲಾವಣೆಗಳನ್ನು ಮಾಡಲಿದ್ದೇವೆ. ಇದಕ್ಕಾಗಿ ಕಾಯ್ದೆ ರೂಪಿಸಲಿದ್ದೇವೆ. ಅಗ್ನಿವೀರರ ಕೌಶಲ್ಯವನ್ನು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಳಸಿಕೊಳ್ಳಲಿದ್ದೇವೆ' ಎಂದು ಹೇಳಿದ್ದಾರೆ.

ಹುತಾತ್ಮರ ಕುಟುಂಬಗಳಿಗೆ ನೀಡುವ ಪರಿಹಾರ ನಿಧಿಯನ್ನು ₹10 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

'ಯಾವ ಬಲಿದಾನವು ದೇಶದ ಗಡಿ ಕಾಯುವ ಯೋಧರ ಬಲಿದಾನಕ್ಕಿಂತ ದೊಡ್ಡದಲ್ಲ. ಅವರ ಬಲಿದಾನಕ್ಕೆ ಯಾವ ಅನುದಾನ ಅಥವಾ ಗೌರವವೂ ಸಾಕಾಗುವುದಿಲ್ಲ' ಎಂದು ಹೇಳಿದ್ದಾರೆ.
.ಅಗ್ನಿವೀರ ನಿಖಿಲ್ ಸಾವಿನ ತನಿಖೆಯಾಗಲಿ: ರಾಷ್ಟ್ರಪತಿ, ಪ್ರಧಾನಿಗೆ ಪೋಷಕರ ಮನವಿ.INDIA ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ ಯೋಜನೆಯನ್ನು ಕಿತ್ತೊಗೆಯಲಿದೆ– ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.