ನವದೆಹಲಿ: ಆಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಬಂಧಿತರಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೇಲ್ ಜೇಮ್ಸ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ಇ.ಡಿ, ಸಿಬಿಐಗೆ ಸೋಮವಾರ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಜಾಮೀನು ಅರ್ಜಿ ತಿರಸ್ಕರಿಸಿದ ಕೆಳಹಂತದ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಜೇಮ್ಸ್ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಮನೋಜ್ ಕುಮಾರ್ ಒಹ್ರಿ ಅವರು ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿದರು.

ಕೆಳಹಂತದ ಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾಗ ಜೇಮ್ಸ್ ಪರ ವಕೀಲ ಅಲ್ಜೊ ಕೆ.ಜೋಸೆಫ್ ಅವರು, ತಮ್ಮ ಕಕ್ಷಿದಾರರು ಎರಡು ವರ್ಷ, ಎಂಟು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ನೀಡಬೇಕು ಎಂದು ಕೋರಿದ್ದರು.

ಪ್ರಕರಣದ ಒಟ್ಟು ಸ್ವರೂಪ, ಆರೋಪಗಳ ಗಂಭೀರತೆ ಹಿನ್ನೆಲೆಯಲ್ಲಿ ಈ ಪ್ರಕರಣ ಜಾಮೀನು ನೀಡಲು ಸೂಕ್ತವಾದುದಲ್ಲ ಎಂದು ಕೆಳಹಂತದ ಕೋರ್ಟ್ ಅರ್ಜಿಯನ್ನು ತಳ್ಳಿಹಾಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.