ನವದೆಹಲಿ: ಅಗಸ್ಟಾವೆಸ್ಟ್ಲ್ಯಾಂಡ್ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ಕ್ರಿಶ್ಚಿಯನ್ ಮೈಕೆಲ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಶುಕ್ರವಾರ ತಿರಸ್ಕರಿಸಿತು.

ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಮೈಕೆಲ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

‘ತನಿಖೆಯ ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಲಾಗದು’ ಎಂದು ಸಿಬಿಐ ಕೋರ್ಟ್ನ ವಿಶೇಷ ನ್ಯಾಯಾಧೀಶ ಅರವಿಂದಕುಮಾರ್ ಹೇಳಿದರು.

ಅಗಸ್ಟಾವೆಸ್ಟ್ಲ್ಯಾಂಡ್ ಕಂಪನಿಯ 12 ವಿವಿಐಪಿ ಹೆಲಿಕಾಪ್ಟರ್ಗಳನ್ನು ಖರೀದಿಸುವ ಸಂದರ್ಭದಲ್ಲಿ ₹ 3,600 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಹಗರಣದ ಪ್ರಮುಖ ಆರೋಪಿಯಾದ ಕ್ರಿಶ್ಚಿಯನ್ ಮೈಕೆಲ್ ಅವರನ್ನು 2018ರಲ್ಲಿ ದುಬೈನಿಂದ ಗಡಿಪಾರು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.