ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಇದರ ಅಂಗವಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, 'ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ' ಎಂದು ತಿಳಿಸಿದ್ದಾರೆ.

ಸಂವಿಧಾನ ಅಂಗೀಕರಿಸಿ 75ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ನವೆಂಬರ್ 26ಕ್ಕೆ ಸೆಂಟ್ರಲ್ ಹಾಲ್ನ ಸಂವಿಧಾನ ಸದನ ಅಥವಾ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆಯಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಯನ್ನು ಮುಂದಿಡಲಿದೆ. ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ.
.ರಾಹುಲ್ ಗಾಂಧಿ ಸಂಸತ್ ಪ್ರವೇಶಿಸಿದ ಬಳಿಕ ಚರ್ಚೆಗಳ ಗುಣಮಟ್ಟ ಕುಸಿತ: ಕಿರಣ್ ರಿಜಿಜು.ಸಂಸತ್ ಕಲಾಪವನ್ನೂ ಮೀರಿಸಿದ ‘ಯುವ ಸಂಸತ್’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.