ಅಹಮದಾಬಾದ್: 2008ರ ಅಹಮದಾಬಾದ್ ಸರಣಿ ಬಾಂಬ್ ದಾಳಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 38 ದೋಷಿಗಳ ಪೈಕಿ 30 ಮಂದಿ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಎಲ್ಲ ಅರ್ಜಿಗಳನ್ನು ಅಂಗೀಕರಿಸಿದ ನ್ಯಾಯಾಲಯ, ಅಪರಾಧಿಗಳ ಮರಣದಂಡನೆಯನ್ನು ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗಳೊಂದಿಗೆ ಈ ಅರ್ಜಿಗಳ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ವಿ.ಎಂ.ಪಾಂಚೋಲಿ ಮತ್ತು ಎ.ಪಿ.ಥಾಕರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಅರ್ಜಿಗಳನ್ನು ಸ್ವೀಕರಿಸಿದೆ.

ಕಳೆದ ಫೆಬ್ರುವರಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ 38 ದೋಷಿಗಳಿಗೆ ಮರಣ ದಂಡಣೆ ವಿಧಿಸಿತ್ತು. ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 2008ರಲ್ಲಿ ನಡೆದ ಸರಣಿ ಬಾಂಬ್ ದಾಳಿಯಲ್ಲಿ 56 ಮಂದಿ ಮೃತಪಟ್ಟು, 200 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.