ಹೈದರಾಬಾದ್: ಪಕ್ಷವು ಅಧಿಕಾರಕ್ಕೆ ಬಂದರೆ ಹೈದಾರಾಬಾದ್ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸುವುದಾಗಿ ಬಿಜೆಪಿ ಮುಖಂಡ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಹೇಳಿದ್ದಾರೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್, ‘ಬಿಜೆಪಿ ಸರ್ಕಾರವು ಗುಜರಾತಿನ ಅಹಮದಾಬಾದ್ ಹೆಸರನ್ನು ಅದಾನಿಬಾದ್ ಎಂದು ಬದಲಿಸಲಿ’ ಎಂದು ವ್ಯಂಗ್ಯವಾಡಿದ್ದಾರೆ.

ಈ ಪ್ರತಿಕ್ರಿಯೆ ಮೂಲಕ ಕೈಗಾರಿಕೋದ್ಯಮಿ ಗೌತಮ್ ಅದಾನಿಯೊಂದಿಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿಕಟ ಸಂಬಂಧದ ವಿರುದ್ಧ ಕೆಟಿಆರ್ ಹರಿಹಾಯ್ದಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ, ‘ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜಧಾನಿಯ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲಾಗುವುದು‘ ಎಂದು ದಾಸ್ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.