ಕೊಯಮತ್ತೂರು:‘ಎಐಎಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದ್ದು, ಅದು ಡಿಎಂಕೆ ಪಕ್ಷದಂತೆ ಅಲ್ಲ’ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಬುಧವಾರ ತಿಳಿಸಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ 73 ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಭೂ ಹೀನ ಬಡ ಕುಟುಂಬಗಳಿಗೆ ತಲಾ ಎರಡು ಎಕರೆ ಭೂಮಿ ನೀಡುವ ಮಹತ್ತರವಾದ ಭರವಸೆಯನ್ನು 2006ರಲ್ಲಿ ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು. ಆದರೆ, ಆ ಭರವಸೆಯನ್ನು ಈಡೇರಿಸಲು ಪಕ್ಷಕ್ಕೆ ಸಾಧ್ಯವಾಗಿಲ್ಲ. ಆದರೆ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಜಿ. ರಾಮಚಂದ್ರನ್ ಅವರ ಕಾಲದಿಂದಲೂ ಎಐಎಡಿಎಂಕೆ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ’ ಎಂದು ಅವರು ಹೇಳಿದ್ದಾರೆ.

‘ಕಳೆದ ಹತ್ತು ವರ್ಷಗಳಲ್ಲಿ ವಿವಾಹ ನೆರವಿಗಾಗಿ ಸರ್ಕಾರ ಸುಮಾರು ₹ 4,200 ಕೋಟಿ ನೆರವು ನೀಡಿದ್ದು, ಇದರಿಂದ 11.8 ಲಕ್ಷ ಮಹಿಳೆಯರಿಗೆ ಅನುಕೂಲವಾಗಿದೆ. ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಮಾಂಗಲ್ಯ ಮಾಡಿಸಿಕೊಡುವ ಜಯಲಲಿತಾ ಅವರ ಮೆಚ್ಚಿನ ಯೋಜನೆಯಡಿ ಈವರೆಗೆ ₹1,79 ಕೋಟಿ ಮೌಲ್ಯದ 6.08 ಕೆ.ಜಿ ಚಿನ್ನ ವಿತರಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.