ಚೆನ್ನೈ: ಇಲ್ಲಿನ ವಣಾಗರಂನಲ್ಲಿ ನಡೆಯುತ್ತಿರುವ ಎಐಎಡಿಎಂಕೆ ಪಕ್ಷದ ಎ. ಪಳನಿ ಸ್ವಾಮಿ ನೇತೃತ್ವದ ಸಾಮಾನ್ಯ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಎಎನ್ಐ ಟ್ವೀಟಿಸಿದೆ.

ಇಂದು ಬೆಳಿಗ್ಗೆ ಪಕ್ಷದ ಸಾಮಾನ್ಯ ಸಭೆಗೆ ಅವಕಾಶ ನೀಡಬಾರದೆಂದು ಕೋರಿ ಪನ್ನೀರ್ ಸೆಲ್ವಂ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ, ನಡೆದ ಸಾಮಾನ್ಯ ಸಭೆಯಲ್ಲಿ ಎ. ಪಳನಿ ಸ್ವಾಮಿ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಏಕ ನಾಯಕತ್ವದ ನಿರ್ಣಯ ಅಂಗೀಕರಿಸಲಾಗಿತ್ತು.

ಇದರ ಬೆನ್ನಲ್ಲೇ, ಪನ್ನೀರ್ ಸೆಲ್ವಂ ಅವರನ್ನು ಉಚ್ಚಾಟಿಸಲಾಗಿದೆ. ದಿವಂಗತ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತರಾಗಿದ್ದ ಒ ಪನ್ನೀರ್ ಸೆಲ್ವ ಅವರು, ಜಯಲಲಿತಾ ಜೈಲಿಗೆ ಹೋದಾಗ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಿದ್ದರು. 2001 -2002, 2014-2015 ಮತ್ತು 2016-2017 ಅವಧಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು.

ಈ ಮಧ್ಯೆ, ಪನ್ನೀರ್ ಬಣದಲ್ಲಿ ಕಾಣಿಸಿಕೊಂಡಿದ್ದ ಆರ್. ವೈತಿಲಿಗಂ, ಜೆಸಿಡಿ ಪ್ರಭಾಕರ್ ಮತ್ತು ಪಿ.ಎಚ್. ಮನೀಜ್ ಪಾಂಡ್ಯನ್ನ ಅವರನ್ನೂ ಉಚ್ಚಾಟಿಸಲಾಗಿದೆ. ಒಪಿಎಸ್ ಮಗ ಸಂಸದ ಪಿ. ರವೀಂದ್ರನಾಥ್ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ.

ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.