ಚೆನ್ನೈ: ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ವಿಷಯುಕ್ತ ಮದ್ಯ ಸೇವಿಸಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ತಮಿಳುನಾಡು ಎಐಎಡಿಎಂಕೆ ಶಾಸಕರು ಮತ್ತು ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಚೆನ್ನೈನ ಎಗ್ಮೋರ್ನಲ್ಲಿರುವ ರಾಜರತ್ನಂ ಸ್ಟೇಡಿಯಂ ಹೊರಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಯಿತು. ಕಪ್ಪು ಬಟ್ಟೆ ಹಾಗೂ ಬಿಳಿ ಪಂಚೆ ಧರಿಸಿದ್ದ ಶಾಸಕರು, ‘ಕಲ್ಲಕುರಿಚ್ಚಿ ದುರಂತದ ಬಗ್ಗೆ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ’ ಎಂದು ಆರೋಪಿಸಿದರು. ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ವಿಪಕ್ಷಗಳಿಗೆ ಅವಕಾಶ ನೀಡದ ಬಗ್ಗೆಯೂ ಖಂಡನೆ ವ್ಯಕ್ತವಾಯಿತು.

ಕಲ್ಲಕುರಿಚ್ಚಿ ದುರಂತದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ಬುಧವಾರ ಎಐಡಿಎಂಕೆ ಶಾಸಕರು ವಿಧಾನಸಭೆಯಲ್ಲಿ ಪಟ್ಟುಹಿಡಿದಿದ್ದರು. ಆಗ ಸ್ಪೀಕರ್ ಎಂ. ಅಪ್ಪಾವು ಅವರು ಅಶಿಸ್ತಿನ ಕಾರಣ ನೀಡಿ ಎಐಎಡಿಎಂಕೆ ಶಾಸಕರನ್ನು ಇದೇ 29ರವರೆಗೆ ನಡೆಯಲಿರುವ ಮಳೆಗಾಲದ ಅಧಿವೇಶನದಿಂದ ಅಮಾನತುಗೊಳಿಸಿ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.