ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ವಶದಲ್ಲಿರುವ ವಿಂಗ್ ಕಮಾಂಡರ್‌ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ತಿಳಿಸಿದ್ದಾರೆ.

ಪಾಕಿಸ್ತಾನದ ಸಂಸತ್ತಿನಲ್ಲಿ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಘೋಷಣೆ ಮಾಡಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ವೃದ್ದಿಸಲು ಮತ್ತು ಶಾಂತಿಯ ಸಂಕೇತವಾಗಿ ಫೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದರು.

ಇದನ್ನೂ ಓದಿ:ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ...

ಪಾಕಿಸ್ತಾನದ ಈ ನಡೆಯಿಂದಾಗಿ ಉಭಯ ದೇಶಗಳನ್ನು ನಡುವೆ ಉಂಟಾಗಿದ್ದ ಬಿಗುವಿನ ವಾತಾವರಣ ತಿಳಿಯಾಗುವ ಸಾಧ್ಯತೆಗಳಿವೆ.

ಭಾರತದ ವಾಯುವಲಯ ಪ್ರವೇಶಿಸಿದ ಪಾಕಿಸ್ತಾನದ ಯುದ್ಧ ವಿಮಾನವನ್ನು ಭಾರತದ ಮಿಗ್ 21 ಯುದ್ಧ ವಿಮಾನ ಬುಧವಾರಹೊಡೆದುರುಳಿಸಿತ್ತು. ಇದೇ ಕಾರ್ಯಾಚರಣೆಯಲ್ಲಿ ಭಾರತದ ಒಂದು ಮಿಗ್ 21 ಯುದ್ಧ ವಿಮಾನ ಪತನಗೊಂಡಿತ್ತು. ಈ ವಿಮಾನದ ಫೈಲಟ್ ಅಭಿನಂದನ್ ಸುರಕ್ಷಿತವಾಗಿ ಪಾಕ್ ಗಡಿಯಲ್ಲಿ ಇಳಿದಿದ್ದರು. ನಂತರ ಅವರನ್ನು ಪಾಕ್ ಸೇನೆ ವಶಕ್ಕೆ ಪಡೆದಿತ್ತು.

ಇದನ್ನೂ ಓದಿ:ಪಾಕಿಸ್ತಾನ ವಶದಲ್ಲಿ ಪೈಲಟ್: ’ಒಪ್ಪಂದ ಅವಕಾಶವಿಲ್ಲ, ತಕ್ಷಣ ಬಿಡುಗಡೆ ಮಾಡಿ’–ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.