ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಇಂದು (ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

ವಿಮಾನದಲ್ಲಿ 130 ಪ್ರಯಾಣಿಕರಿದ್ದು, ಸುರಕ್ಷಿತವಾಗಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಮುಂಬೈನಿಂದ ಹೊರಡಬೇಕಿದ್ದ ಮೂರು ಅಂತರರಾಷ್ಟ್ರೀಯ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅದರಲ್ಲಿ ನ್ಯೂಯಾರ್ಕ್ಗೆ ಸಂಚರಿಸಬೇಕಿದ್ದ ಏರ್ ಇಂಡಿಯಾ ವಿಮಾನವು ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

‘ಭದ್ರತಾ ತಪಾಸಣೆಯನ್ನು ನಡೆಸಲಾಗಿದ್ದು, ವಿಮಾನಗಳೊಳಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದರು.
.3 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ.ಜಬಲ್ಪುರ-ಹೈದರಾಬಾದ್ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ: ಮಾರ್ಗ ಬದಲಾವಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.