ಕೋಯಿಕ್ಕೋಡ್: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಒಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲರೂ ಕ್ವಾರಂಟೈನ್‌ಗೆ ಒಳಗಾಗಲು ಸರ್ಕಾರ ಸೂಚಿಸಿದೆ.

ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡಿರುವ ಎಲ್ಲ ಸಂತ್ರಸ್ತ್ರರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

'ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದವರನ್ನು ಕ್ವಾರಂಟೈನ್‌ಗೆ ಒಳಪಡಿಸಿ, ಎಲ್ಲರ ಕೋವಿಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ' ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು (ಐಎಕ್ಸ್ 1344) ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು.

ಶುಕ್ರವಾರ ಸಂಜೆ 7.40ಕ್ಕೆ ನಡೆದ ಅವಘಡದಲ್ಲಿ 17 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದರು.

ವಿಮಾನವು ರನ್‌ವೇಯಲ್ಲಿ ಇಳಿಯುವ ವೇಳೆಗೆ ಸ್ಕಿಡ್ ಆಯಿತು. ಈ ಸಂದರ್ಭದಲ್ಲಿ ಬೆಂಕಿ ಉಂಟಾಗಿಲ್ಲ. ಕೋವಿಡ್ ಪಿಡುಗಿನಿಂದಾಗಿ ವಿದೇಶದಲ್ಲಿ ಸಿಲುಕಿರುವವರನ್ನು ಕರೆತರಲು ಆರಂಭಿಸಲಾದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಈ ವಿಮಾನ ಹಾರಾಟ ನಡೆಸಿತ್ತು.

ವಿಮಾನದಲ್ಲಿ 174 ವಯಸ್ಕರು ಮತ್ತು 10 ಪುಟ್ಟ ಮಕ್ಕಳಿದ್ದರು. ಐವರು ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈಲಟ್ ದೀಪಕ್ ಸಾಠೆ ಮೃತಪಟ್ಟಿದ್ದಾರೆ. ಅವರು ಭಾರತೀಯ ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದರು. ವಿಮಾನ ತಪಾಸಣೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.