ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಳ, ಪ್ರಯಾಣಿಕರು ಮತ್ತು ಅವರ ಲಗೇಜ್ಗಳ ತಪಾಸಣೆ ಸೇರಿದಂತೆ ವಿವಿಧ ಭದ್ರತಾ ಸೇವೆಗಳಿಗೆ ನೀಡುವ ‘ವಿಮಾನಯಾನ ಭದ್ರತಾ ಶುಲ್ಕ(ಎಎಸ್ಎಫ್) ನಾಗರಿಕ ವಿಮಾನಯಾನ ನಿಯಂತ್ರಕರು ಹೆಚ್ಚಿಸಿರುವ ಹಿನ್ನೆಲೆಯಲ್ಲಿ, ಗುರುವಾರದಿಂದ (ಏಪ್ರಿಲ್ 1) ವಿಮಾನಯಾನದ ಟಿಕೆಟ್ಗಳು ದುಬಾರಿಯಾಗಲಿವೆ.

‘ದೇಶದೊಳಗೆ ಸಂಚರಿಸುವ ಪ್ರತಿ ಪ್ರಯಾಣಿಕರಿಗೆ ವಿಮಾನಯಾನ ಭದ್ರತಾ ಶುಲ್ಕ ₹200, ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 12 ಅಮೆರಿಕನ್ ಡಾಲರ್ ಅಥವಾ ಅಷ್ಟೇ ಬೆಲೆಯ ಭಾರತೀಯ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಇದುವರೆಗೆ ₹ 160 ಮತ್ತು 5.20 ಡಾಲರ್ ಶುಲ್ಕ ಇತ್ತು‘ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಹೊಸ ವಿಮಾನಯಾನ ಭದ್ರತಾ ಶುಲ್ಕ ಏಪ್ರಿಲ್ 1ರಿಂದ ಖರೀದಿಸುವ ಟಿಕೆಟ್ಗಳಿಗೆ ಅನ್ವಯವಾಗಲಿದೆ ಎಂದು ನಾಗರಿಕ ವಿಮಾನಯಾನ ನಿಯಂತ್ರಕರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ವಿಮಾನಯಾನ ಭದ್ರತಾ ಶುಲ್ಕವನ್ನು ಏರಿಕೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.