ನವದೆಹಲಿ: ಇಂದು(ಬುಧವಾರ) ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪುನಃ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದೆ ಎಂದು ಮೂಲಗಳು ತಿಳಿಸಿವೆ.

180 ಪ್ರಯಾಣಿಕರಿದ್ದ QP1335 ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಮೂಲಗಳು ತಿಳಿಸಿವೆ.

ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.

ವಿಮಾನವನ್ನು ರನ್ವೇಯಿಂದ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಪ್ರಯಾಣಿಕರನ್ನು ಕೆಳಗಿಸಲಾಯಿತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬಳಿಕ, ಭದ್ರತಾ ಪರಿಶೀಲನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

7 ಮಂದಿ ವಿಮಾನದ ಸಿಬ್ಬಂದಿ, ಮೂವರು ಮಕ್ಕಳು ಮತ್ತು 174 ಮಂದಿ ಪ್ರಯಾಣಿಕರು ಪ್ರಯಾಣಸುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು ಎಂದು ಆಕಾಶ ಏರ್ ಪ್ರಕಟಣೆ ತಿಳಿಸಿದೆ.

ವಿಮಾನದ ಕ್ಯಾಪ್ಟನ್ ತುರ್ತು ಸಂದರ್ಭದಲ್ಲಿ ಅಗತ್ಯವಿದ್ದ ಎಲ್ಲ ನಿಯಮಗಳನ್ನು ಪಾಲಿಸಿದ್ದಾರೆ. ವಿಮಾನವನ್ನು ಮತ್ತೆ ದೆಹಲಿಯತ್ತ ಮಾರ್ಗ ಬದಲಿಸಲಾಗಿದ್ದು, ಮಧ್ಯಾಹ್ಮ 1.48ರ ಸುಮಾರಿಗೆ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದೂ ಅದು ತಿಳಿಸಿದೆ.

ಕೂಡಲೇ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ಸ್ಥಳೀಯ ಅಧಿಕಾರಿಗಳ ನೆರವಿನೊಂದಿಗೆ ಅಗತ್ಯವಿದ್ದ ಭದ್ರತಾ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳವಾರ 7 ವಿಮಾನಗಳಿಗೆ ಬೆದರಿಕೆ

ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ಏಳು ವಿಮಾನಗಳಿಗೆ ಮಂಗಳವಾರ(ಅ.15) ಸಾಮಾಜಿಕ ಮಾಧ್ಯಮಗಳ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು.ಇವುಗಳಲ್ಲಿ ಎರಡು ಅಂತರರಾಷ್ಟ್ರೀಯ ವಿಮಾನಗಳು ತುರ್ತು ಭೂಸ್ಪರ್ಶ ಮಾಡಿದ್ದವು.

ಅಯೋಧ್ಯೆ ಮೂಲಕ ಜೈಪುರದಿಂದ ಬೆಂಗಳೂರಿಗೆ, ದೆಹಲಿಯಿಂದ ಷಿಕಾಗೊಗೆ ಮತ್ತು ಮಧುರೈನಿಂದ ಸಿಂಗಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾದ ಮೂರು ವಿಮಾನಗಳು, ದರ್ಭಂಗಾದಿಂದ ಮುಂಬೈಗೆ ಸಂಚರಿಸಿದ ಸ್ಪೈಸ್ ಜೆಟ್ ವಿಮಾನ ಹಾಗೂ ಸಿಲಿಗುರಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಸ ವಿಮಾನ, ಸೌದಿ ಅರೇಬಿಯಾದ ದಮಾಮ್ನಿಂದ ಲಖನೌಗೆ ಬರುತ್ತಿದ್ದ ಇಂಡಿಗೋ ವಿಮಾನ, ಅಮೃತಸರ–ಡೆಹ್ರಾಡೂನ್–ದೆಹಲಿ ಅಲೈಯನ್ಸ್ ವಿಮಾನಗಳಿಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದವು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿತ್ತು.ಮಧ್ಯಾಹ್ನ 2.25 ಗಂಟೆಗೆ ಅಯೋಧ್ಯೆಯಿಂದ ಬೆಂಗಳೂರಿಗೆ ಹೊರಡಬೇಕಿದ್ದ ಈ ವಿಮಾನವು ಸಂಜೆ 5 ಗಂಟೆಗೆ ಸಂಚಾರ ಆರಂಭಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.