ಅಲಿಗಡ/ಲಖನೌ: ಅಲಿಗಡದಲ್ಲಿ ಶುಕ್ರವಾರ ಸಂಭವಿಸಿದ್ದ ಕಳ್ಳಭಟ್ಟಿ ದುರಂತದಲ್ಲಿ ಮತ್ತೆ 11 ಜನರು ಮೃತಪಟ್ಟಿರುವುದು ಸೋಮವಾರ ದೃಢಪಟ್ಟಿದೆ. ಇದರಿಂದ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.ವಿಷಕಾರಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ದಿನೇ ದಿನೇ ಏರುತ್ತಿದ್ದು ಉತ್ತರ ಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ.

ಇದರ ಬೆನ್ನಲ್ಲೆ ಉತ್ತರ ಪ್ರದೇಶ ಸರ್ಕಾರ ಅಬಕಾರಿ ಆಯುಕ್ತ ಪಿ. ಗುರುಪ್ರಸಾದ್ ಮತ್ತು ಇಬ್ಬರು ಹಿರಿಯ ಅಧಿಕಾರಿಗಳು ಅಮಾನತು ಮಾಡಿದೆ. ಅಲ್ಲದೆ ಇಡೀ ದುರಂತದ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ.

ವಿಷಕಾರಿ ಮದ್ಯ ಸೇವಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿರುವ ಇತರ 35 ಜನರ ಒಳಾಂಗಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಇಲ್ಲಿನ ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಭಾನು ಪ್ರತಾಪ್ ಕಲ್ಯಾಣಿ ತಿಳಿಸಿದ್ದಾರೆ.

ಈ ದುರಂತದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಸತತ ಮೂರನೇ ದಿನವೂ ಪೊಲೀಸರು, ಅಬಕಾರಿ ಅಧಿಕಾರಿಗಳು ದಾಳಿಗಳನ್ನು ಮುಂದುವರಿಸಿದ್ದು, ಅಕ್ರಮ ಮದ್ಯ ವ್ಯಾಪಾರದಲ್ಲಿ ನೇರ ಮತ್ತು ಪರೋಕ್ಷವಾಗಿ ಭಾಗಿ ಆಗಿರುವ 10 ಜನರನ್ನು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆಶುಕ್ರವಾರದಿಂದ ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಬಂಧಿತರಾಗಿರುವ ಸಂಖ್ಯೆ 30ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈಥಾನಿ ತಿಳಿಸಿದ್ದಾರೆ.

ಅಕ್ರಮ ಮದ್ಯ ವ್ಯಾಪಾರಕ್ಕೆ ಬಳಸಲಾಗುತ್ತಿದ್ದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ರಸ್ತೆ ಬದಿಯ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆಯೇ ಎಂಬುದರ ಕುರಿತು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಕ್ರಮ ಮದ್ಯ ವ್ಯಾಪಾರದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ ಎಂದು ಅವರು ಹೇಳಿದರು.

‘ಶುಕ್ರವಾರದಿಂದ ಸೋಮವಾರ ಮುಂಜಾನೆಯವರೆಗೆ ಒಟ್ಟು 71 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಇವುಗಳ ಪೈಕಿ 36 ಜನರ ಸಾವಿಗೆ ವಿಷಕಾರಿ ಮದ್ಯವೇ ಕಾರಣ ಎಂಬುದು ದೃಢಪಟ್ಟಿದೆ. ಉಳಿದ 35 ಶವಗಳ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಅವರ ಸಾವಿಗೂ ವಿಷಯುಕ್ತ ಮದ್ಯವೇ ಕಾರಣ ಎಂದು ಶಂಕಿಸಲಾಗಿದೆ. ಆದರೆ, ಇವರ ಒಳಾಂಗಗಳ ವರದಿ ಬಂದ ನಂತರವೇ ಸಾವಿಗೆ ಖಚಿತ ಕಾರಣ ತಿಳಿಯುತ್ತದೆ’ ಎಂದು ಸಿಎಂಒ ಭಾನು ಪ್ರತಾಪ್ ಕಲ್ಯಾಣಿ ತಿಳಿಸಿದ್ದಾರೆ.

ಅಲಿಗಢ: ಲಸಿಕೆ ತುಂಬಿದ ಸಿರಿಂಜುಗಳು ಕಸದ ಬುಟ್ಟಿಗೆ- ದಾದಿ ವಿರುದ್ಧ ಕೇಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.