ಲಖನೌ: 2007ರ ಗೋರಖಪುರ ಗಲಭೆ ಸಂಬಂಧ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ₹ 1 ಲಕ್ಷ ದಂಡ ವಿಧಿಸಿದೆ.

ಸುಪ್ರೀಂ ಕೋರ್ಟ್ನಲ್ಲಿ ಈ ವಿಚಾರ ಇತ್ಯರ್ಥವಾಗಿದ್ದರೂ ಕೂಡ ವ್ಯಕ್ತಿ ಪದೇ ಪದೇ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುತ್ತಿದ್ದರು. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಪರ್ವೇಜ್ ಪರ್ವಾಜ್ ಎಂಬವರೇ ದಂಡ ತೆತ್ತವರು.

2007 ಜನವರಿ 27 ರಂದು ನಡೆದ ಮೊಹರಂ ಮೆರವಣಿಗೆಯಲ್ಲಿ ಎರಡು ಪಂಗಡಗಳ ನಡುವೆ ಜಗಳ ಉಂಟಾಗಿ, ಓರ್ವ ಹಿಂದೂ ವ್ಯಕ್ತಿ ಮೃತಪಟ್ಟಿದ್ದರು.

ಈ ಘಟನೆಗೆ ಅಂದಿನ ಗೋರಖಪುರ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರು ಮಾಡಿದ ಭಾಷಣವೇ ಕಾರಣ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪರ್ವೇಜ್, 2008ರ ಸೆಪ್ಟೆಂಬರ್ 26 ರಂದು ದೂರು ಸಲ್ಲಿಸಿದ್ದರು.

ಆದರೆ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರವು ನಿರಾಕರಿಸಿತ್ತು.

ಸರ್ಕಾರದ ಈ ನಿರ್ಧಾರ ವಿರುದ್ಧ ಪರ್ವೇಜ್ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಆ ಆರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿತ್ತು. ಸುಪ್ರೀಂ ಕೋರ್ಟ್ ಕೂಡ ಮೇಲ್ಮನವಿಯನ್ನು ತಿರಸ್ಕರಿಸಿತ್ತು.

ಗಲಭೆ ಸಂಬಂಧ ಪೊಲೀಸರು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವರದಿಯ ವಿರುದ್ಧ ಪರ್ವೇಜ್ 2022ರ ಅಕ್ಟೋಬರ್ 11ರಂದು ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾಗಿದೆ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತಲ್ಲದೆ, ₹ 1 ಲಕ್ಷ ದಂಡವನ್ನೂ ವಿಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.