ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬುಧವಾರ ಖಚಿತಪಡಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಪ್ರಸ್ತಾಪವನ್ನು ಅಂಗೀಕರಿಸಿದ್ದಲ್ಲಿ ಮಾತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಹೇಳಿಕೆಯಿಂದಾಗಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು.

ಈ ಮೊದಲು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 17 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ಧರಿರುವುದಾಗಿ ಸಮಾಜವಾದಿ ಪಕ್ಷ ತಿಳಿಸಿತ್ತು. ರಾಯ್‌ಬರೇಲಿಯಲ್ಲಿ ಮಂಗಳವಾರ ನಡೆದ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲೂ ಅಖಿಲೇಶ್ ಪಾಲ್ಗೊಂಡಿರಲಿಲ್ಲ.

ಆದರೆ ಇದೀಗ ಇದೇ ವಿವಾದ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್, ‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲಾಗುವುದು. ಈ ಕುರಿತು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ನಮ್ಮ ನಡುವೆ ಯಾವುದೇ ಬಿಕ್ಕಟ್ಟು ಸೃಷ್ಟಿಯಾಗಿಲ್ಲ, ಎಲ್ಲವೂ ಸುಸೂತ್ರವಾಗಿ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
.ಲೋಕಸಭೆ ಚುನಾವಣೆ: ಯುಪಿಯಲ್ಲಿ ಕಾಂಗ್ರೆಸ್-SP ಮೈತ್ರಿಗೆ ಪ್ರಿಯಾಂಕಾ ಮಧ್ಯಸ್ಥಿಕೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.