ನವದೆಹಲಿ: ಇ ಕಾಮರ್ಸ್ ಕಂಪನಿ ಅಮೆಜಾನ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ಹರ್‌ಪ್ರೀತ್ ಗಿಲ್ ಎಂಬುವರನ್ನು ಈಶಾನ್ಯ ದೆಹಲಿಯ ಭಜನ್‌ಪುರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಂಗಳವಾರ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ. ಸುಭಾಶ್ ವಿಹಾರ್ ಬಳಿ ಐವರು ದುಷ್ಕರ್ಮಿಗಳ ಗುಂಪು ಗಿಲ್ ಮತ್ತು ಅವರ ಸ್ನೇಹಿತ ಗೋವಿಂದ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿದೆ.

ತಲೆಗೆ ಗುಂಡು ತಗುಲಿದ್ದರಿಂದ ಆಸ್ಪತ್ರೆಗೆ ಕರೆತರುವ ಮುನ್ನವೇ ಗಿಲ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಆತನ ಸ್ನೇಹಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಲಭಾಗದ ಕಿವಿ ಬಳಿಯಿಂದ ತಲೆಗೆ ಹೊಕ್ಕಿದ್ದ ಬುಲೆಟ್ ಮತ್ತೊಂದು ಕಡೆಯಿಂದ ಹೊರಬಂದಿದೆ ಎಂದು ಡಿಸಿಪಿ ಜಾಯ್ ಟಿರ್ಕಿ ಹೇಳಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಗಿಲ್ ಮತ್ತು ಆತನ ಸ್ನೇಹಿತನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.