ಗುವಾಹಟಿ:ಕಾನೂನುಬಾಹಿರ ಚಟುವಟಿಕೆ ತಡೆಯುವ ಸಲುವಾಗಿ ಶೀಘ್ರದಲ್ಲೇ ತೆರೆಯಲಿರುವ ಆನ್ಲೈನ್ ಪೋರ್ಟಲ್ನಲ್ಲಿ ಹಣದ ಮೂಲ ಸೇರಿದಂತೆ ತಮ್ಮ ವಿವರಗಳನ್ನು ಅಪ್ಲೋಡ್ ಮಾಡುವಂತೆ ಅಸ್ಸಾಂ ಪೊಲೀಸರು ಭಾನುವಾರ ಎಲ್ಲಾ ಖಾಸಗಿ ಮದರಸಾಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಜಿಹಾದಿ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಈ ನಿರ್ದೇಶನ ನೀಡಲಾಗಿದೆ. ಭಯೋತ್ಪಾದಕ ಸಂಘಟನೆಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಸ್ಥಳೀಯ ಆಡಳಿತವು ಆಗಸ್ಟ್ನಲ್ಲಿ ಮೂರು ಮದರಸಾಗಳನ್ನು ನೆಲಸಮಗೊಳಿಸಿತ್ತು.

ಮುಸ್ಲಿಂ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತ, ‘ಮಾಹಿತಿ ಪ್ರಕಾರ ರಾಜ್ಯದಲ್ಲಿ 1 ಸಾವಿರ ಖಾಸಗಿ ಮದರಸಾಗಳು ಇವೆ.ಅವುಗಳಲ್ಲಿ ಕೆಲವು ಮದರಸಾಗಳ ಚಟುವಟಿಕೆಗಳನ್ನು ನೋಡಿಕೊಳ್ಳುವ ಸಂಸ್ಥೆಗಳೊಂದಿಗೆ ನೋಂದಾಯಿಸಿಲ್ಲ.ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳನ್ನು ಹೊಂದಿರುವ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಅಂತಹ ಮದರಸಾಗಳು ತಮ್ಮ ವಿವರ, ಜಮೀನು, ಶಿಕ್ಷಕರು ಮತ್ತು ಹಣದ ಮೂಲಗಳ ವಿವರಗಳನ್ನು ಬಹಿರಂಗಪಡಿಸುವುದನ್ನು ಸಮಿತಿ ಖಚಿತಪಡಿಸುತ್ತದೆ. ಈ ಕಾರ್ಯ ಆರು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದು ಅವರು ಹೇಳಿದರು.

ಬಿಜೆಪಿ ನೇತೃತ್ವದ ಸರ್ಕಾರ ಈ ಹಿಂದೆ ರಾಜ್ಯದಲ್ಲಿ ಸುಮಾರು 800 ಸರ್ಕಾರಿ ಅನುದಾನಿತ ಮದರಸಾಗಳನ್ನು ಮುಚ್ಚಿತ್ತು.ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಆರೋಪಕ್ಕೆ ಸಂಬಂಧಿಸಿಕಳೆದ ಮಾರ್ಚ್ನಿಂದ ಮದರಾಸ ಶಿಕ್ಷಕರು ಸೇರಿದಂತೆ 37 ಮಂದಿಯನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.