ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಅಮಿತ್ ಅಗರವಾಲ್ ಅವರನ್ನು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಡಿಎಐ) ಸಿಇಒ ಆಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್ಟಿಎ) ಪ್ರಧಾನ ನಿರ್ದೇಶಕರಾಗಿ (ಡಿಜಿ) ಐಎಎಸ್ ಅಧಿಕಾರಿ ಸುಭೋದ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಅಗರವಾಲ್ ಅವರು 1993 ಹಾಗೂ ಸಿಂಗ್ 1997ನೇ ತಂಡದ ಅಧಿಕಾರಿಗಳು. ಇಬ್ಬರೂ ಛತ್ತೀಸಗಢ ಕೇಡರ್ನವರು.

ಅಗರವಾಲ್ ಸದ್ಯ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆಗಿದ್ದರೆ, ಸಿಂಗ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.