ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಟೀಕೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕನಿಗೆ ಇತಿಹಾಸದ ಬಗ್ಗೆ ತಿಳಿವಳಿಕೆ ಇಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಂಡಿತ್ ನೆಹರೂ ಅವರು ನಮ್ಮ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವರ್ಷಗಟ್ಟಲೇ ಜೈಲಿನಲ್ಲಿ ಇದ್ದರು. ಅಮಿತ್ ಶಾ ಅವರಿಗೆ ಇತಿಹಾಸ ಗೊತ್ತಿಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.
.ನೆಹರೂ ಪ್ರಮಾದದಿಂದಾಗಿ ಕಾಶ್ಮೀರ ಸಮಸ್ಯೆ: ಅಮಿತ್ ಶಾ.ಆಳ–ಅಗಲ: ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನದ ಹಿನ್ನೆಲೆ–ಮುನ್ನೆಲೆ ಏನು?.
ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸಲಾಗುತ್ತಿದೆ. ಮೂಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿಯಿಲ್ಲ. ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮಾಡಿದ ಪ್ರಮಾದಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸಬೇಕಾಯಿತು ಎಂದು ಅಮಿತ್ ಶಾ, ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ದೂರಿದ್ದರು.

ನೆಹರೂ ಹೊಣೆಯಲ್ಲ: ಫಾರೂಕ್ ಅಬ್ದುಲ್ಲಾ

‘ಜಮ್ಮು–ಕಾಶ್ಮೀರ ಸಮಸ್ಯೆಗೆ ನೆಹರೂ ಕಾರಣರಲ್ಲ. ವಿಷಯ ಹೀಗಿದ್ದರೂ, ನೆಹರೂ ವಿರುದ್ಧ ಅವರಿಗೆ ಇಷ್ಟೊಂದು ದ್ವೇಷ ಯಾಕೆ ಎಂಬುದು ಅರ್ಥವಾಗುತ್ತಿಲ್ಲ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.

ನೆಹರೂ ಕುರಿತು ರಾಜ್ಯಸಭೆಯಲ್ಲಿ ಅಮಿತ್ ಶಾ ನೀಡಿರುವ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

‘370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ನೆಹರೂ ಅಮೆರಿಕದಲ್ಲಿದ್ದರು. ಈ ನಿರ್ಧಾರ ಕೈಗೊಂಡ ಸಭೆಯಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್, ಶ್ಯಾಮಪ್ರಸಾದ್ ಮುಖರ್ಜಿ ಪಾಲ್ಗೊಂಡಿದ್ದರು’ ಎಂದು ಅಬ್ದುಲ್ಲಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.