ಕೋಲ್ಕತ್ತ: ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ 35 ಸ್ಥಾನಗಳನ್ನು ಗೆದ್ದರೆ, 2025ರ ನಂತರ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವೇ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನುಡಿದಿದ್ದಾರೆ. ಅವರ ಹೇಳಿಕೆಯು ಅಸಾಂವಿಧಾನಿಕವಾದುದು. ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿರುವ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಲ್ಲಿ ಗೃಹ ಸಚಿವರಾಗಿರುವವರೊಬ್ಬರು ರಾಜ್ಯವೊಂದರಲ್ಲಿ ಅಸ್ತಿತ್ವದಲ್ಲಿರುವ ಚುನಾಯಿತ ಸರ್ಕಾರವೊಂದನ್ನು ಉರುಳಿಸುವ ಬಗ್ಗೆ ಹೇಗೆ ಮಾತನಾಡುತ್ತಾರೆ. ಈ ದೇಶದ ಸಂವಿಧಾನ ಬದಲಾಗಿದೆಯೇ? ಜವಾಬ್ದಾರಿಯುತ ಹುದ್ದೆಯಲ್ಲಿರುವ ಅವರು ಈ ರೀತಿ ಮಾತನಾಡಬಾರದು’ ಎಂದು ತಿಳಿಸಿದ್ದಾರೆ.

‘ರಾಜ್ಯದ ಜನರು 2026ರವರೆಗೂ ಆಡಳಿತ ನಡೆಸುವಂತೆ ನಮ್ಮ ಸರ್ಕಾರಕ್ಕೆ ಬಹುಮತ ನೀಡಿದ್ದಾರೆ. ಶಾ ಅವರು ಯಾವ ಕಾನೂನಿನ ಅಡಿಯಲ್ಲಿ ಚುನಾಯಿತ ಸರ್ಕಾರವೊಂದನ್ನು ಬುಡಮೇಲು ಮಾಡುವ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯನ್ನು ನಿರ್ನಾಮ ಮಾಡಲು ಹೊರಟಿದೆ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.