ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅಭಿಯಾನದ ಭಾಗವಾಗಿ ಗೃಹ ಸಚಿವ ಅಮಿತ್ ಶಾ -ಸೋನಾಲ್ ಶಾ ದಂಪತಿ ಇಂದು (ಸೋಮವಾರ) ದೆಹಲಿಯ ನಿವಾಸದ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರೆ ನೀಡಿದ್ದರು. ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವಾಗಿ ಬದಲಾಯಿಸಲು ಪ್ರಧಾನಿ ಮೋದಿ, ದೇಶದ ಜನತೆಗೆ ವಿನಂತಿ ಮಾಡಿದ್ದರು. ಈ ಮೂಲಕ ದೇಶ ಮತ್ತು ನಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಗಾಢವಾಗಲಿದೆ ಎಂದು ಹೇಳಿದ್ದರು.

ಕಳೆದ ವರ್ಷ ತಿರಂಗಾ ಜೊತೆ ಫೋಟೊ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಪ್ರಧಾನಿ ಕರೆ ನೀಡಿದ್ದರು.

ಹರ್ ಘರ್ ತಿರಂಗಾ ಅಭಿಯಾನವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಚೈತನ್ಯ ನೀಡಲಿದೆ. ದೇಶವಾಸಿಗಳು ಈ ಅಭಿಯಾನವನ್ನು ಈ ವರ್ಷ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಆಗಸ್ಟ್ 13ರಿಂದ 15ರ ನಡುವೆ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜವನ್ನು ಹಾರಿಸಿ. ರಾಷ್ಟ್ರಧ್ವಜದೊಂದಿಗೆ ನಿಮ್ಮ ಫೋಟೊಗಳನ್ನು ಅಪ್‌ಲೋಡ್ ಮಾಡಿ ಎಂದು ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.