ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Tripura Local Body Polls:BJPಗೆ ಭರ್ಜರಿ ಜಯ;ಮತದಾರರಿಗೆ ಧನ್ಯವಾದ ಸಲ್ಲಿಸಿದ ಶಾ

Published 14 ಆಗಸ್ಟ್ 2024, 6:27 IST
Last Updated 14 ಆಗಸ್ಟ್ 2024, 6:27 IST
ಅಕ್ಷರ ಗಾತ್ರ

ನವದೆಹಲಿ: ತ್ರಿಪುರಾದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಮುಖ್ಯಮಂತ್ರಿ ಮುಖ್ಯಮಂತ್ರಿ ಮಾಣಿಕ್‌ ಸಹಾ ಅವರು ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವಿಗೆ ಕಾರಣರಾದ ತ್ರಿಪುರಾದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ಅವಿರತ ಶ್ರಮಿಸಿದ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಭಟ್ಟಾಚಾರ್ಯ ಅವರನ್ನು ಅಭಿನಂದಿಸುತ್ತೇನೆ’ ಎಂದು ಅಮಿತ್ ಶಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಹಾಕಿದ್ದಕ್ಕಾಗಿ ತ್ರಿಪುರಾದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವು ಪ್ರಧಾನಿ ಮೋದಿ ಅವರ ‘ವಿಕಸಿತ ಭಾರತ-2047’ ಎಂಬ ಪರಿಕಲ್ಪನೆಯಡಿ ತ್ರಿಪುರಾದ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಗ್ರಾಮ ಪಂಚಾಯತ್, ಜಿಲ್ಲಾ ಪರಿಷತ್ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಬಿಜೆಪಿಗೆ ಮತ ಹಾಕಿದ ಎಲ್ಲರಿಗೂ ಧನ್ಯವಾದಗಳು. ದೂರದೃಷ್ಟಿಯ ಮಾರ್ಗದರ್ಶನ ಮತ್ತು ಅಚಲವಾದ ಬೆಂಬಲ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಮಾಣಿಕ್‌ ಸಹಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 8ರಂದು ನಡೆದ ಚುನಾವಣೆಯಲ್ಲಿ 34 ಪಟ್ಟಣ ಪಂಚಾಯತಿಗಳಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಸಾಧಿಸಿದೆ. ಜತೆಗೆ, ಎಲ್ಲಾ 8 ಜಿಲ್ಲಾ ಪರಿಷತ್‌ಗಳಲ್ಲಿ ಗೆಲುವಿನ ನಗೆ ಬೀರಿದ್ದು, 606 ಗ್ರಾಮ ಪಂಚಾಯತಿಗಳ ಪೈಕಿ 585 ಪಂಚಾಯತಿಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT