ನವದೆಹಲಿ: ಸಚಿವಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೊನೆಗೂ ಮೌನಮುರಿದಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರೋಪ ಸತ್ಯವೇ ಅಥವಾ ಸುಳ್ಳೇ ಎಂಬ ಕುರಿತು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

‘ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಸಂದೇಶದ ಸತ್ಯಾಸತ್ಯತೆ ಮತ್ತು ಆ ಸಂದೇಶ ಪ್ರಕಟಿಸಿದ ವ್ಯಕ್ತಿಯ ಹಿನ್ನೆಲೆ ಬಗ್ಗೆ ಪರಿಶೀಲಿಸಲಿದ್ದೇವೆ. ನೀವು ನನ್ನ ಹೆಸರನ್ನು ಬಳಸಿಕೊಂಡೂ ಸಂದೇಶ ಪ್ರಕಟಿಸಬಹುದು. ನಾವು ಆ ಬಗ್ಗೆ ಖಂಡಿತಾ ಗಮನಹರಿಸುತ್ತೇವೆ’ ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ ಸಂಪುಟಕ್ಕೂ ತಟ್ಟಿದ #MeToo ಬಿಸಿ: ಸಚಿವ ಎಂಜೆ ಅಕ್ಬರ್ ವಿರುದ್ಧ ಆರೋಪ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಆರಂಭವಾಗಿರುವ #MeToo ಅಭಿಯಾನದ ಮೂಲಕ ಅನೇಕ ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಅಕ್ಬರ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ.

ಇದನ್ನೂ ಓದಿ:ಮಿ–ಟೂ ಅಟಾಟೋಪ: ಸಚಿವ ಅಕ್ಬರ್ ತಲೆದಂಡಕ್ಕೆ ಒತ್ತಡ

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ಪತ್ರಕರ್ತೆ ಪ್ರಿಯಾ ರಮಣಿ ಅವರುವೋಗ್ ಇಂಡಿಯಾದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲೇಖನವೊಂದನ್ನು ಬರೆದಿದ್ದರು. ಆದರೆ, ಅದರಲ್ಲಿ ಅಕ್ಬರ್ ಹೆಸರನ್ನು ಉಲ್ಲೇಖಿಸಿರಲಿಲ್ಲ. ಇತ್ತೀಚೆಗೆ ಆ ಲೇಖನದ ಲಿಂಕ್ ಅನ್ನು ಟ್ವೀಟ್ ಮಾಡಿದ್ದ ಅವರು,‘ಎಂಜೆ ಅಕ್ಬರ್ ಕತೆಯೊಂದಿಗೆ ಇದನ್ನು ಆರಂಭಿಸುತ್ತೇನೆ. ಆದರೆ ಅವರ ಹೆಸರನ್ನು ಉಲ್ಲೇಖಿಸಿಲ್ಲ; ಯಾಕೆಂದರೆ ಅವರೇನೂ ‘ಮಾಡಿಲ್ಲ’. ಈ ಬೇಟೆಗಾರನಿಂದ ಅನೇಕ ಮಹಿಳೆಯರಿಗೆ ಕೆಟ್ಟ ಅನುಭವ ಆಗಿರಬಹುದು. ಬಹುಶಃ ಅವರದನ್ನು ಹಂಚಿಕೊಳ್ಳಬಹುದು’ ಎಂದು ಬರೆದಿದ್ದರು.

ಇದನ್ನೂ ಓದಿ:ಮೌನ ಮುರಿದ ಮಹಿಳೆಯರು; ಮನೋಭಾವಗಳು ಬದಲಾಗಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.