ಶಾಂತಿನಿಕೇತನ(ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ವಿಶ್ವ–ಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಇಲ್ಲಿನ ರವೀಂದ್ರ ಭವನದಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರ ಗೌರವಾರ್ಥ ನಮನ ಸಲ್ಲಿಸಿದರು.

ಅಮಿತ್ ಶಾ ಅವರು ಉಪಾಸನಾ ಗೃಹ (ಪ್ರಾರ್ಥನಾ ಗೃಹ) ಮತ್ತು ಸಂಗೀತ ಭವನಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ರಚಿಸಿದ ಗೀತೆಗಳನ್ನು ಹಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಬಿಗಿ ಭದ್ರತೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಆಗಮಿಸಿದರು. ಸುಮಾರು ಒಂದೂವರೆ ಗಂಟೆಯ ತನಕ ಅಲ್ಲಿ ಇದ್ದರು. ಪಶ್ಚಿಮ ಬಂಗಾಳದಲ್ಲಿ ಎರಡು ದಿನದ ಪ್ರವಾಸದಲ್ಲಿರುವ ಅಮಿತ್ ಶಾ ಅವರು, ಎರಡನೇ ದಿನ ರವೀಂದ್ರ ಭವನಕ್ಕೆ ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.