ಚಂಡೀಗಢ: ಸಿಖ್ ಮೂಲಭೂತವಾದಿ ಧರ್ಮಪ್ರಚಾರಕ ಅಮೃತ್ಪಾಲ್ ಸಿಂಗ್ನ ಸಹಚರ ಜೋಗಾ ಸಿಂಗ್ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಲುಧಿಯಾನ ನಿವಾಸಿಯಾಗಿರುವ ಜೋಗಾ ಸಿಂಗ್, ಉತ್ತರಪ್ರದೇಶದ ಪಿಲಿಭಿತ್ನಲ್ಲಿ ಅಮೃತ್ಪಾಲ್ಗೆ ಆಶ್ರಯ ನೀಡಿದ್ದ ಎಂದು ಆರೋಪಿಸಲಾಗಿದೆ.

‘ಅಮೃತ್ಪಾಲ್ ಜೊತೆ ಜೋಗಾ ಸಿಂಗ್ ನೇರ ನಂಟು ಹೊಂದಿದ್ದ. ಪಿಲಿಭಿತ್ನಲ್ಲಿ ಆತನಿಗೆ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದ’ ಎಂದು ಡಿಐಜಿ ನರಿಂದರ್ ಭಾರ್ಗವ್ ಅವರು ತಿಳಿಸಿದ್ದಾರೆ.

ಹರಿಯಾಣದಿಂದ ಪಂಜಾಬ್ಗೆ ಬರುತ್ತಿದ್ದಾಗ ಜೋಗಾ ಸಿಂಗ್ನನ್ನು ಬಂಧಿಸಲಾಗಿದೆ ಎಂದೂ ವಿವರಿಸಿದ್ದಾರೆ.

ಅಮೃತ್ಪಾಲ್ಗೆ ಆಶ್ರಯ ನೀಡಿದ ಆರೋಪದಲ್ಲಿ ರಾಜ್ದೀಪ್ ಸಿಂಗ್ ಮತ್ತು ಸರಬ್ಜಿತ್ ಸಿಂಗ್ ಎಂಬುವವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ಅಮೃತ್ಪಾಲ್ ಸಿಂಗ್ ಪಪಲ್ಪ್ರೀತ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದರು. ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.