ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ.

ಪಕ್ಷದ ಪ್ರಮುಖ ನಾಯಕ ಆನಂದಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್‌ನ ಸಂಚಾಲನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆನಂದಶರ್ಮಾ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ, ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳಲಾರೆ ಎಂದು ಶರ್ಮಾ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಜಿ– 23 ಗುಂಪಿನ ಮತ್ತೊಬ್ಬ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಸೋನಿಯಾ ಗಾಂಧಿಗೆ ಶರ್ಮಾ ತಿಳಿಸಿದ್ದಾರೆ. ಆದರೂ, ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.