ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದಿನ ಸರ್ಕಾರ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಸಿತ್ತು: ನಾಯ್ಡು

Published : 18 ಸೆಪ್ಟೆಂಬರ್ 2024, 20:17 IST
Last Updated : 18 ಸೆಪ್ಟೆಂಬರ್ 2024, 20:17 IST
ಫಾಲೋ ಮಾಡಿ
Comments

ಅಮರಾವತಿ: ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದಾರೆ.

‘ತಿರುಮಲ ಲಡ್ಡು ಕೂಡ ಗುಣಮಟ್ಟವಿಲ್ಲದ ಪದಾರ್ಥಗಳಿಂದ ತಯಾರಿಸಲ್ಪಟ್ಟಿದೆ. ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ’ ಎಂದು ನಾಯ್ಡು ಅವರು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು.

‘ಆದರೆ, ಈಗ ಶುದ್ಧ ತುಪ್ಪ ಬಳಸಲಾಗುತ್ತಿದೆ. ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ಧೀಕರಿಸಲಾಗಿದೆ. ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ’ ಎಂದು ನಾಯ್ಡು ಹೇಳಿದರು.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಿರ್ವಹಿಸುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ತಿರುಪತಿ ಲಡ್ಡು ಪ್ರಸಾದವಾಗಿ ನೀಡಲಾಗುತ್ತದೆ.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT