ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ನೀಡಲಾಗಿದೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಇದೇ ವೇಳೆ ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಸೇರಿದಂತೆ ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 25 ಸದಸ್ಯರ ಸಚಿವ ಸಂಪುಟದಲ್ಲಿ ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾದಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಎನ್. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ವಿಭಜನೆಯಾದ ನಂತರ ಈಗ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.

ರಾಜ್ಯದಲ್ಲಿ ನಡೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಎನ್ಡಿಎ ಕೂಟವು ಭರ್ಜರಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಗಳಲ್ಲಿ 175 ಸ್ಥಾನಗಳ ಪೈಕಿ 164 ಸ್ಥಾನ ಮತ್ತು 25 ಲೋಕಸಭಾ ಸ್ಥಾನಗಳ ಪೈಕಿ 21 ಸ್ಥಾನ ಗೆದ್ದಿತ್ತು.
.4ನೇ ಬಾರಿ ಆಂಧ್ರ CM ಆಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು: ಮೋದಿ ಭಾಗಿ.ಸಂಪುಟ ರಚನೆಯತ್ತ ನಾಯ್ಡು ಚಿತ್ತ: ಡಿಸಿಎಂ ಆಗಿ ಪವನ್ ಕಲ್ಯಾಣ್?.ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ: ಪವನ್ ಕಲ್ಯಾಣ್ ಹೇಳಿದ್ದೇನು?.ನಾನು ಇನ್ನೂ ಎನ್ಡಿಎಯಲ್ಲಿದ್ದೇನೆ–ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.