ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದ ನೆರವಿಲ್ಲದೆ ಆಂಧ್ರ ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ: ನಾಯ್ಡು

Published : 19 ಸೆಪ್ಟೆಂಬರ್ 2024, 9:17 IST
Last Updated : 19 ಸೆಪ್ಟೆಂಬರ್ 2024, 9:17 IST
ಫಾಲೋ ಮಾಡಿ
Comments

ಅಮರಾವತಿ: 'ಕೇಂದ್ರ ಸರ್ಕಾರದ ನೆರವು ಇಲ್ಲದೆ ಆಂಧ್ರ ಪ್ರದೇಶವು ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ' ಎಂದು ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನೊಳಗೊಂಡ ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ನಾಯ್ಡು, ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುತ್ತಿರುವ ನೆರವು, ವೆಂಟಿಲೇಟರ್‌ ಮೂಲಕ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಆಮ್ಲಜನಕ ನೀಡಿದಂತೆ ಎಂದು ಬಣ್ಣಿಸಿದ್ದಾರೆ.

ಕೇಂದ್ರದ ನೆರವಿನ ಮಹತ್ವ ಸಾರಿರುವ ಮುಖ್ಯಮಂತ್ರಿ, ಬರೋಬ್ಬರಿ ₹ 10 ಲಕ್ಷ ಕೋಟಿ ಸಾಲ ರಾಜ್ಯದ ಮೇಲಿದೆ. ಸುಮಾರು ₹ 1 ಲಕ್ಷ ಕೋಟಿಯಷ್ಟು ಬಿಲ್‌ ಬಾಕಿ ಇವೆ ಎಂದು ವಿವರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು, ಬೊಕ್ಕಸದಲ್ಲಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೂ ಅಲ್ಲದೇ, ಕೇಂದ್ರದ ಅನುದಾನವನ್ನೂ ಬೇರಡೆ ವರ್ಗಾಯಿಸಿತ್ತು ಎಂದು ಆರೋಪಿಸಿದ್ದಾರೆ.

ತಮ್ಮದೇ ರೀತಿಯಲ್ಲಿ ಪ್ರತಿ ಕ್ಷೇತ್ರದ ಅಭಿವೃದ್ಧಿಯ ವಿನ್ಯಾಸದ ದಾಖಲೆ ಸಿದ್ಧಪಡಿಸುವಂತೆ ಎನ್‌ಡಿಎ ಕೂಟದ ಶಾಸಕರು ಮತ್ತು ಸಂಸದರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT