ಅಮರಾವತಿ: ವೈಎಸ್ಆರ್ಸಿಪಿ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ಮಾರ್ಚ್ 7ರಂದು ಗುಂಟೂರು ಜಿಲ್ಲೆಯ ತೆನಾಲಿ ರೈಲು ನಿಲ್ದಾಣದಲ್ಲಿ ಗೀತಾಂಜಲಿ ಎಂಬುವರು ಚಲಿಸುತ್ತಿದ್ದ ರೈಲಿನಡಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಮೂರು ದಿನಗಳ ಬಳಿಕ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

‘ಜಗನ್ ಮೋಹನ್ ರೆಡ್ಡಿ ಅವರು ಗೀತಾಂಜಲಿ ಅವರ ಆತ್ಮಹತ್ಯೆ ಕುರಿತು ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ, ವಿರೋಧ ಪಕ್ಷಗಳ ಕಾರ್ಯಕರ್ತರಿಂದ ಟ್ರೋಲ್ಗೆ ಒಳಗಾಗಿ ಗೀತಾಂಜಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿರುವ ಕುಟುಂಬಸ್ಥರಿಗೆ ಅಗತ್ಯ ಬೆಂಬಲ ನೀಡುವಂತೆಯೂ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ಕೆಲವು ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳನ್ನು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದುಡಿ ತಿಳಿಸಿದ್ದಾರೆ.

ಏತನ್ಮಧ್ಯೆ, ಆರೋಗ್ಯ ಸಚಿವೆ ವಿ. ರಜನಿ ಸೇರಿದಂತೆ ವೈಎಸ್ಆರ್ಸಿಪಿ ಮುಖಂಡರು ಗೀತಾಂಜಲಿಯವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಗೀತಾಂಜಲಿ ಸಾವಿಗೆ ತೆಲುಗು ದೇಶಂ (ಟಿಡಿಪಿ) ಮತ್ತು ಜನಸೇನಾ ಪಕ್ಷದ ಬೆಂಬಲಿಗರೇ ಕಾರಣ ಕಾರಣ ಎಂದು ವೈಎಸ್ಆರ್ಸಿಪಿ ಮುಖಂಡರು ಆರೋಪಿಸಿದ್ದಾರೆ.
.Andhra: ಎನ್ಡಿಎ ಸೀಟು ಹಂಚಿಕೆ; ಬಿಜೆಪಿ 6, ಟಿಡಿಪಿ 17 ಸ್ಥಾನಗಳಲ್ಲಿ ಸ್ಪರ್ಧೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.