ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರ: ಭಾರೀ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ

Published : 31 ಮೇ 2019, 13:01 IST
ಫಾಲೋ ಮಾಡಿ
Comments

ಹೈದರಾಬಾದ್‌: ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್‌ ರೆಡ್ಡಿ ಹಿರಿಯ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಹಾಗೂ ಸರ್ಕಾರದ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿದ್ದಾರೆ.

ಚಂದ್ರಬಾಬು ನಾಯ್ಡು ಸರ್ಕಾರದಲ್ಲಿದ್ದ ನಾಲ್ವರು ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಮುಖ ಆಯಾಕಟ್ಟಿನ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಟಿಡಿಪಿ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಭಾರೀ ಪ್ರಮಾಣದಲ್ಲಿ ಬದಲಾವಣೆ ಮಾಡಿದ್ದಾರೆ.

ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಹಿರಿಯ ನಾಗರೀಕರ ಮಾಸಿಕ ಪಿಂಚಣಿ ಮೊತ್ತವನ್ನು ₹2000 ರಿಂದ ₹2250ಕ್ಕೆ ಹೆಚ್ಚಳ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದ ಅಧಿಕಾರಿಗಳನ್ನು ನೂತನ ಸರ್ಕಾರ ಬದಲಾವಣೆ ಮಾಡಿದೆ.

ಅಧಿಕಾರಿಗಳ ವರ್ಗಾವಣೆ ಮತ್ತು ಬದಲಾವಣೆಯನ್ನು ಟಿಡಿಪಿ ಪಕ್ಷ ಖಂಡಿಸಿದೆ. ಇದು ಅನುಕೂಲಸಿಂದು ರಾಜಕಾರಣಕ್ಕೆ ಆಡಳಿತಯಂತ್ರವನ್ನು ನೂತನ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಟಿಡಿಪಿ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT