ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಹೊರಡಿಸಿರುವ ಆದೇಶಕ್ಕೆ ತಡೆ ನೀಡುವಂತೆ ಅಂಜುಮನ್ ಇಂತೆಜಾಮಿಯಾ ಮಸೀದಿ ಸಮಿತಿಯು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.

ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿಯೇ ಮಸೀದಿ ಸಮಿತಿಯು ಅರ್ಜಿ ಸಲ್ಲಿಸಿದೆ.

‘ಎಎಸ್ಐ ವೈಜ್ಞಾನಿಕ ಸಮೀಕ್ಷೆ ನಡೆಸದಂತೆ ತಡೆ ನೀಡಬೇಕು ಎಂದು ಕೋರಿ ರಜಾಕಾಲದ ವಿಶೇಷ ಅರ್ಜಿಯನ್ನು ಇ–ಮೇಲ್ ಮೂಲಕ ಸಲ್ಲಿಸಿದ್ದೇನೆ’ ಎಂದು ಮಸೀದಿ ಪರ ವಕೀಲ ಎಂ.ನಿಜಾಮುದ್ದೀನ್ ಪಾಷಾ ಹೇಳಿದ್ದಾರೆ. ಅರ್ಜಿಯನ್ನು ವಿಚಾರಣಾ ಪಟ್ಟಿಗೆ ಸೇರಿಸಲು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಸಮ್ಮತಿಸಿದೆ.

‘ವೈಜ್ಞಾನಿಕ ಸಮೀಕ್ಷೆಯು ಒಡ್ಡುವ ಅಪಾಯಗಳು ದೇಶದಾದ್ಯಂತ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

‘ಮಸೀದಿಯ ಸಮೀಕ್ಷೆಗಾಗಿ ಕಳೆದ ವರ್ಷ ಆಯುಕ್ತರನ್ನು ನೇಮಕ ಮಾಡಲಾಗಿತ್ತು. ಈ ವಿಷಯ ಕುರಿತು ಮಾಧ್ಯಮಗಳಲ್ಲಿ ಆಗ ವ್ಯಾಪಕ ಸುದ್ದಿಗಳೂ ಬಿತ್ತರವಾಗಿದ್ದವಲ್ಲದೇ ಕೋಮು ಸಂಘರ್ಷದ ಆತಂಕ ಮೂಡಿತ್ತು’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ವೈಜ್ಞಾನಿಕ ಸಮೀಕ್ಷೆ ನಡೆಸುವುದು ಪೂಜಾ ಸ್ಥಳಗಳ (ವಿಶೇಷ ಅವಕಾಶಗಳ) ಕಾಯ್ದೆ–1991ರಲ್ಲಿನ ಅವಕಾಶಗಳಿಗೆ ವಿರುದ್ಧವಾಗಲಿದೆ’ ಎಂದೂ ಸಮಿತಿ ಪ್ರತಿಪಾದಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.