ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಜೊತೆಗೆ ಗುರುತಿಸಿಕೊಂಡಿರುವ ಬಿಜೆಪಿ ಸೇರಿದಂತೆ 32 ಸಂಘಟನೆಗಳ ಹಿರಿಯ ಪದಾಧಿಕಾರಿಗಳ ವಾರ್ಷಿಕ ಸಭೆ ಆಗಸ್ಟ್ 31ರಿಂದ ಕೇರಳದ ಪಾಲಕ್ಕಾಡ್‌ನಲ್ಲಿ ನಡೆಯಲಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಜಂಟಿ ಪ್ರಧಾನ ಕಾರ್ಯದರ್ಶಿಗಳು, ಇತರೆ ಮುಖಂಡರು ಭಾಗವಹಿಸುವರು ಎಂದು ಮಾಧ್ಯಮ ಘಟಕದ ಮುಖ್ಯಸ್ಥ ಸುನಿಲ್ ಅಂಬೇಡ್ಕರ್ ತಿಳಿಸಿದ್ದಾರೆ.

‘ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಸಮನ್ವಯ ಬೈಠಕ್ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರವರೆಗೆ ಪಾಲಕ್ಕಾಡ್‌ನಲ್ಲಿ ನಡೆಯಲಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೈಠಕ್‌ನಲ್ಲಿ ಆರ್‌ಎಸ್ಎಸ್‌ನ ಸಹವರ್ತಿ ಸಂಘಟನೆಗಳಾದ ರಾಷ್ಟ್ರಸೇವಿಕಾ ಸಮಿತಿ, ವನವಾಸಿ ಕಲ್ಯಾಣ ಆಶ್ರಮ, ವಿಶರ್ವ ಹಿಂದೂ ಪರಿಷತ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಭಾರತೀಯ ಜನತಾ ಪಕ್ಷ, ಭಾರತೀಯ ಕಿಸಾನ್ ಸಂಘ, ವಿದ್ಯಾಭಾರತಿ ಮತ್ತು ಭಾರತೀಯ ಮಜ್ದೂರ್ ಸಂಘದ ಹಿರಿಯ ಸದಸ್ಯರು ಭಾಗವಹಿಸುವರು ಎಂದು ತಿಳಿಸಿದೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಹಿರಿಯ ಮುಖಂಡರು ಇತ್ತೀಚಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಸಭೆ ಸೇರಿ ಹಲವು ವಿಷಯಗಳನ್ನು ಚರ್ಚಿಸಿದ್ದರು.

ಪಕ್ಷ ಮತ್ತು ಸಂಘಟನೆಯ ಬಲವರ್ಧನೆ, ಮುಂಬರುವ ಚುನಾವಣೆ ಸೇರಿ ಹಲವು ವಿಷಯಗಳು ಚರ್ಚೆಯಾಗಿದ್ದವು. ಸಭೆಯಲ್ಲಿ ದತ್ತಾತ್ತೇಯ ಹೊಸಬಾಳೆ ಅವರಲ್ಲದೇ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.