ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ | ಮತ್ತೊಂದು ಸೇತುವೆ ಕುಸಿತ: 15 ದಿನಗಳಲ್ಲಿ 10ನೇ ದುರ್ಘಟನೆ

Published 4 ಜುಲೈ 2024, 6:33 IST
Last Updated 4 ಜುಲೈ 2024, 6:33 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ಇಂದು (ಗುರುವಾರ) ಮತ್ತೊಂದು ಸೇತುವೆ ಕುಸಿದು ಬಿದ್ದಿದೆ. ಆ ಮೂಲಕ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಇಂಥ ದುರ್ಘಟನೆಗಳ 10ನೇ ಪ್ರಕರಣ ದಾಖಲಾಗಿವೆ.

ಸರನ್‌ ಜಿಲ್ಲೆಯಲ್ಲಿ 15 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದೆ. ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ಜಿಲ್ಲಾಧಿಕಾರಿ ಅಮನ್ ಸಮೀರ್ ತಿಳಿಸಿದ್ದಾರೆ.

ಬನೇಯಪುರ ಬ್ಲಾಕ್‌ನಲ್ಲಿರುವ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕಿರು ಸೇತುವೆಯು ಸರನ್‌ನ ಹಲವಾರು ಹಳ್ಳಿಗಳು ಹಾಗೂ ನೆರೆಯ ಸಿವಾನ್ ಜಿಲ್ಲೆಯನ್ನು ಸಂಪರ್ಕಿಸುತ್ತದೆ.

ಬುಧವಾರದಂದು ಸರನ್ ಜಿಲ್ಲೆಯ ಜನತಾ ಬಜಾರ್ ಹಾಗೂ ಲಹಲಾದ್‌ಪುರ ಪ್ರದೇಶದಲ್ಲಿ ಸೇತುವೆ ಕುಸಿದಿತ್ತು. ದುರ್ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT