ನವದೆಹಲಿ: 12 ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ತನ್ನ ಪಾಲನ್ನು ಶೇ 51ಕ್ಕಿಂತ ಕಡಿಮೆಗೊಳಿಸಲು ಕೇಂದ್ರ ಸರ್ಕಾರ ಯಾವುದೇ ಹೆಜ್ಜೆ ಇರಿಸಿದರೆ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರಬಲ ಪ್ರತಿರೋಧ ತೋರಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಕಳೆದ ಏಳು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಉದ್ಯಮದಲ್ಲಿ ವಿಲೀನಗಳು ನಡೆದಿವೆ. ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಸರ್ಕಾರದ ಪಾಲು ಶೇಕಡಾ 51ಕ್ಕಿಂತ ಕಡಿಮೆ ಆಗಬಾರದು ಎಂದು ಅದು ಹೇಳಿದೆ.

‘55 ವರ್ಷಗಳ ಹಿಂದೆ ಇದೇ ದಿನದಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು 14 ಬ್ಯಾಂಕ್ಗಳನ್ನು ರಾಷ್ಟ್ರೀಕರಣಗೊಳಿಸಲು ನಿರ್ಣಾಯಕ ಕ್ರಮ ಕೈಗೊಂಡಿದ್ದರು. ದೇಶದ ಆರ್ಥಿಕ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದರು’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಮರಿಸಿದ್ದಾರೆ.

ಬ್ಯಾಂಕ್ ರಾಷ್ಟ್ರೀಕರಣವು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕತೆಯ ಇತರ ಆದ್ಯತೆಯ ಕ್ಷೇತ್ರಗಳಿಗೆ ಸಾಲ ನೀಡುವಿಕೆಯ ಮೇಲೆ ಆಳವಾದ ಪರಿಣಾಮಗಳನ್ನು ಬೀರಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.