ಅಮರಾವತಿ: ‘ಅಮರಾವತಿ ಭೂಹಗರಣ’ಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ಪೊಲೀಸರು ಮಂಗಳವಾರ ನೋಟಿಸ್ ಜಾರಿ ಮಾಡಿದ್ದಾರೆ.

‘ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ವಿಜಯವಾಡದಲ್ಲಿರುವ ಸಿಐಡಿ ಪ್ರಾದೇಶಿಕ ಕಚೇರಿಯಲ್ಲಿ ಮಾರ್ಚ್ 23ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕು’ ಎಂದು ತನಿಖಾಧಿಕಾರಿ ಲಕ್ಷ್ಮೀನಾರಾಯಣರಾವ್ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

‘ಕ್ಷುಲ್ಲಕ ಕಾರಣಕ್ಕಾಗಿ ಚಂದ್ರಬಾಬು ನಾಯ್ಡು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ತೆಲುಗು ದೇಶಂ ಪಾರ್ಟಿ ಪ್ರತಿಕ್ರಿಯಿಸಿದೆ.

ವೈಎಸ್‌ಆರ್ ಕಾಂಗ್ರೆಸ್ ಶಾಸಕರಾದ ಅಲ್ಲ ರಾಮಕೃಷ್ಣ ರೆಡ್ಡಿ ನೀಡಿರುವ ದೂರಿನನ್ವಯ ಮಾರ್ಚ್ 12ರಂದು ಈ ಎಫ್‌ಐಆರ್ ದಾಖಲಿಸಲಾಗಿದೆ. ಟಿಡಿಪಿಯ ಮತ್ತೊಬ್ಬ ಮುಖಂಡ ಹಾಗೂ ಮಾಜಿ ಸಚಿವ ಪಿ.ನಾರಾಯಣ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮರಾವತಿ ನಗರವನ್ನು ಆಂಧ್ರಪ್ರದೇಶದ ನೂತನ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ಸಂಬಂಧ 2015ರಲ್ಲಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದು ಆರೋಪ.

ಈ ಆರೋಪದಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಆದರೆ, ಈಗ ಆರು ವರ್ಷಗಳ ನಂತರ ಈ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.