ಶ್ರೀನಗರ: ‘ಈಚೆಗೆ ನೇಮಕವಾದ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಖ್ ಕಾಕರ್ ಅವರ ವಿಶೇಷ ಸಲಹೆಗಾರ್ತಿಯಾಗಿ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಪತ್ನಿಯನ್ನು ನೇಮಿಸಿರುವುದು ಆ ದೇಶದ ಆಂತರಿಕ ವಿಚಾರ’ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ.

ಮಾನವ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣದ ವಿಚಾರವಾಗಿ ಯಾಸಿನ್ ಪತ್ನಿ ಮಿಷಲ್ ಹುಸೇನ್ ಮಲಿಕ್ ಅವರನ್ನು ಪ್ರಧಾನಿ ಸಲಹೆಗಾರ್ತಿಯಾಗಿ ನೇಮಿಸಲಾಗಿದೆ.

‘ನಾವು ಸಚಿವರನ್ನು ನೇಮಿಸುವ ಮುಂಚೆ ಪಾಕಿಸ್ತಾನವನ್ನು ಸಂಪರ್ಕಿಸುತ್ತೇವೆಯೇ? ಹಾಗೆಯೇ, ಅವರು ಸಚಿವರನ್ನು ನೇಮಿಸುವಾಗ ನಮ್ಮನ್ನು ಸಂಪರ್ಕಿಸಬೇಕು ಎಂದು ಏಕೆ ನಿರೀಕ್ಷಿಸಬೇಕು? ಅದು ಅವರ ಆಂತರಿಕ ವಿಚಾರವಾಗಿದ್ದು, ನಮಗೆ ಸಂಬಂಧಿಸಿದ್ದಲ್ಲ’ ಎಂದು ಉಮರ್ ಅವರು ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಭಾರತದ ಭೂಪ್ರದೇಶವನ್ನು ಚೀನಾ ಆಕ್ರಮಣ ಮಾಡುತ್ತಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಡುವೆ ನಡೆಯುತ್ತಿರುವ ವಾಕ್‌ಸಮರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ‘ನಾನು ಲಡಾಕ್‌ನಲ್ಲಿ ಇಲ್ಲ. ರಾಹುಲ್ ಗಾಂಧಿ ಅವರೇ ಈ ಪ್ರಶ್ನೆಗೆ ಉತ್ತರಿಸುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.