ಜಮ್ಮು: ‘ನಿರ್ದಿಷ್ಟ ದಾಳಿ (ಸರ್ಜಿಕಲ್ ಸ್ಟ್ರೈಕ್) ಬಗ್ಗೆ ಸಶಸ್ತ್ರ ಪಡೆಗಳು ಯಾವುದೇ ಪುರಾವೆ ನೀಡುವ ಅಗತ್ಯ ಇಲ್ಲ’ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಈ ಕುರಿತು ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆಯನ್ನು ನಾನಾಗಲಿ, ಪಕ್ಷವಾಗಲಿ ಒಪ್ಪಿಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಇಲ್ಲಿ ಮಾತನಾಡಿದ ಅವರು, ‘ದಿಗ್ವಿಜಯ ಸಿಂಗ್ ಹೇಳಿಕೆಯನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸ್ಪಟಿಕದಷ್ಟು ಸ್ಪಷ್ಟ. ಇದು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವು ಕೂಡಾ ಹೌದು’ ಎಂದು ಹೇಳಿದ್ದಾರೆ.

ಭಾರತ್ ಜೋಡೊ ಯಾತ್ರೆಯ ಅಂಗವಾಗಿ ಜಮ್ಮುವಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ದಿಗ್ವಿಜಯ ಸಿಂಗ್ ಅವರು ನಿರ್ದಿಷ್ಟ ದಾಳಿಯನ್ನು ಪ್ರಶ್ನಿಸಿದ್ದರು. ಅಲ್ಲದೆ ಸರ್ಕಾರವು ಈ ಕುರಿತು ಸುಳ್ಳಿನ ಕಂತೆ ಕಟ್ಟುತ್ತಿದೆ ಎಂದೂ ಆರೋಪಿಸಿದ್ದರು.

‘ವರ್ಚಸ್ಸು ಕೆಡಿಸಲು ಸಾವಿರಾರು ಕೋಟಿ ಹಣ ಖರ್ಚು’:

‘ವ್ಯವಸ್ಥಿತವಾಗಿ ನನ್ನ ವರ್ಚಸ್ಸನ್ನು ಕೆಡಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ. ಆದರೆ ಸತ್ಯ ಯಾವತ್ತಿದ್ದರೂ ಹೊರಗೆ ಬಂದೇ ಬರುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮನ್ನು ‘ಪಪ್ಪು’ ಎಂದು ಅಣಕಿಸುವುದರ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ದೇಶದಲ್ಲಿ ಸತ್ಯ ನೆಲೆ ನಿಲ್ಲುತ್ತದೆ ಹೊರತು ಹಣ, ಅಧಿಕಾರ ಮತ್ತು ದುರಹಂಕಾರವಲ್ಲ ಎಂಬುದನ್ನು ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಕಲಿಸಲಿದೆ’ ಎಂದರು.

‘ಹಣ ಮತ್ತು ಅಧಿಕಾರದಿಂದ ಏನನ್ನು ಬೇಕಿದ್ದರೂ ಸಾಧಿಸಬಹುದು ಎಂದು ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ತಿಳಿದುಕೊಂಡಿದ್ದಾರೆ’ ಎಂದೂ ಕುಟುಕಿದರು.

ಯಾತ್ರೆಯಲ್ಲಿ ಪಾಲ್ಗೊಂಡ ಊರ್ಮಿಳಾ:

ಇಲ್ಲಿನ ನಗ್ರೋಟದ ಗ್ಯಾರಿಸನ್ ನಗರದಿಂದ ಮಂಗಳವಾರ ಆರಂಭಗೊಂಡ ಭಾರತ್ ಜೋಡೊ ಯಾತ್ರೆಯಲ್ಲಿ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಪಾಲ್ಗೊಂಡರು.

ಊರ್ಮಿಳಾ ಅವರು 2019 ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ತೊರೆದಿದ್ದರು. 2020ರಲ್ಲಿ ಶಿವಸೇನಾಗೆ ಸೇರ್ಪಡೆಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.