ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆ ನೆಪದಲ್ಲಿ ಕಲ್ಲು ತೂರಾಟ ನಡೆಸುವವರು ಉಗ್ರಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧ ಸೇನೆಯು ನಿಸ್ಸಂದೇಹವಾಗಿ ಕ್ರಮ ಕೈಗೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಶನಿವಾರ ಹೇಳಿದ್ದಾರೆ.

ಕಾಶ್ಮೀರದಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟದಲ್ಲಿ ಯೋಧನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದ್ದು, ‘ಗಡಿ ಉಲ್ಲಂಘನೆ ಭಯೋತ್ಪಾದನೆಯನ್ನು ಪಾಕಿಸ್ತಾನ್ ಬೆಂಬಲಿಸುತ್ತಿದೆ’ ಎಂದು ಹೇಳಿದ್ದಾರೆ. ಅಲ್ಲದೆ, ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿದರೆ ‘ಬೇರೆ ಕ್ರಮ’ಗಳನ್ನೂ ಕೈಗೊಳ್ಳಬೇಕಾಗುತ್ತದೆ ಎಂದೂ ರಾವತ್ ಎಚ್ಚರಿಸಿದ್ದಾರೆ. ಆದರೆ, ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಅವರು ಹೇಳಲಿಲ್ಲ.

ಅನಂತನಾಗ್ ಜಿಲ್ಲೆಯಲ್ಲಿ ಯುವಕರ ಗುಂಪೊಂದು ನಡೆಸಿದ ಕಲ್ಲು ತೂರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ (22) ಶುಕ್ರವಾರ ಸಾವಿಗೀಡಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.