ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

LOCಗೆ ಸೇನಾ ಮುಖ್ಯಸ್ಥ ಭೇಟಿ; ನಾಳೆ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗಿ

Published : 25 ಜುಲೈ 2024, 9:48 IST
Last Updated : 25 ಜುಲೈ 2024, 9:48 IST
ಫಾಲೋ ಮಾಡಿ
Comments

ಶ್ರೀನಗರ: ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರು ಇಂದು (ಗುರುವಾರ) ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌‌

ಗಡಿ ಭಾಗದಲ್ಲಿ ಒಳನುಸುಳುವಿಕೆ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಪಡೆ ಜತೆ ಮಾತುಕತೆ ನಡೆಸಿದರು. ಕಾರ್ಯಪಡೆಗಳ ಕಾರ್ಯಚಟುವಟಿಕೆಯನ್ನೂ ಪರಿಶೀಲಿಸಿದರು. ನಾಳೆ ಕಾರ್ಗಿಲ್‌ ವಿಜಯ ದಿವಸದ ರಜತ ಮಹೋತ್ಸವದ ಆಚರಣೆಯಲ್ಲಿ ಪಾಲ್ಗೊಳ್ಳಲು ಕಾರ್ಗಿಲ್‌ಗೆ ತೆರಳಿದರು ಎಂದು ತಿಳಿದು ಬಂದಿದೆ.

ಭೇಟಿ ವೇಳೆ ಜನರಲ್‌ ದ್ವಿವೇದಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಜತೆಗೆ ಇದ್ದರು . ಈ ವೇಳೆ ಕುಪ್ವಾರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ದಿಲಾವರ್ ಖಾನ್ ಅವರಿಗೆ ಗೌರವ ನಮನ ಸಲ್ಲಿಸಿದರು.

26 ಜುಲೈ 1999ರಂದು ಕಾರ್ಗಿಲ್ ಸಂಘರ್ಷ ಎಂದೂ ಕರೆಯಲ್ಪಡುವ ಕಾರ್ಗಿಲ್ ಯುದ್ಧವು ಅಧಿಕೃತವಾಗಿ ಕೊನೆಗೊಂಡಿತ್ತು. ಪಾಕಿಸ್ತಾನ ನುಸುಳುಕೋರರು ವಶಪಡಿಸಿಕೊಂಡಿದ್ದ ಪರ್ವತ ಶ್ರೇಣಿಗಳನ್ನು ಭಾರತೀಯ ಸೈನಿಕರು ಯಶಸ್ವಿಯಾಗಿ ಮರು ವಶಕ್ಕೆ ಪಡೆದಿದ್ದರು. ಹೀಗಾಗಿ ದೇಶದಾದ್ಯಂತ ಜುಲೈ 26ರಂದು ’ಕಾರ್ಗಿಲ್‌ ವಿಜಯ ದಿವಸ’ ಎಂದು ಆಚರಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT