ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರು ಮೂರು ದಿನಗಳ ಭೇಟಿಗಾಗಿ ದಕ್ಷಿಣ ಕೊರಿಯಾಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಅವರು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ವಿಸ್ತರಿಸುವ ಮಾರ್ಗಗಳ ಕುರಿತು ಚರ್ಚಿಸಲಿದ್ದಾರೆ.

ಈಗಾಗಲೇ ಅರಬ್ ಒಕ್ಕೂಟ ರಾಷ್ಟ್ರ ಮತ್ತು ಸೌದಿ ಅರೇಬಿಯಾದ ಆರು ದಿನಗಳ ಪ್ರವಾಸವನ್ನು ಪೂರೈಸಿದ ಎರಡು ವಾರಗಳ ನಂತರ, ಭಾರತಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ಪ್ರಮುಖ ರಾಷ್ಟ್ರ ದಕ್ಷಿಣ ಕೋರಿಯಾಕ್ಕೆ ನರವಣೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದಾರೆ. ಈ ವಿದ್ಯಮಾನಗಳು ಭಾರತ, ಎರಡು ಪ್ರಭಾವಿ ಕೊಲ್ಲಿ ರಾಷ್ಟ್ರಗಳೊಂದಿಗೆ ಬೆಸೆಯುತ್ತಿರುವ ಕಾರ್ಯತಂತ್ರದ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ.

ಜನರಲ್ ನರವಣೆ ಅವರು ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ದೇಶದ ರಕ್ಷಣಾ ಸಚಿವ, ಸೇನಾ ಮುಖ್ಯಸ್ರು, ಮತ್ತು ರಕ್ಷಣಾ ಸ್ವಾಧೀನ ಯೋಜನೆ ಆಡಳಿತ ಸಚಿವರರನ್ನೂ (ಡಿಎಪಿಎ) ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ರಕ್ಷಣಾ ಸಂಬಂಧವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಜನರಲ್ ನರವಣೆ ಚರ್ಚಿಸಲಿದ್ದಾರೆ ಎಂದು ಸೇನೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.